ದೇಶ

ನದಿಗೆ ಉರುಳಿ ಬಿದ್ದ ಖಾಸಗಿ ಬಸ್: 6 ಮಂದಿ ಸಾವು; 18 ಮಂದಿಗೆ ಗಾಯ

ಭೋಪಾಲ್,.3-ಖಾಸಗಿ ಬಸ್ ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಆರು ಮಂದಿ ಸಾವನ್ನಪ್ಪಿ, 18 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರೈಸೆನ್ ಬಳಿ ನಡೆದಿದೆ.

ರಾಜಧಾನಿ ಭೋಪಾಲ್ಗೆ 40 ಕಿ.ಮೀ ಅಂತರದಲ್ಲೇ ದುರ್ಘಟನೆ ಸಂಭವಿಸಿದೆ. ಇಂದೋರ್ನಿಂದ ಬರುತ್ತಿದ್ದ ಚತ್ಹಾಪುರ್ ಬಸ್ ಚಾಲಕನ ಅತಿವೇಗದ ಚಾಲನೆಯಿಂದ ಸೇತುವೆಯ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿ ಬಿದ್ದಿದೆ.

ಏಳು ಮಂದಿ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 11 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಭೂಪಾಲ್ಗೆ ಕಳುಹಿಸಲಾಗಿದೆ ಎಂದು ರೈಸನ್ ಜಿಲ್ಲಾಧಿಕಾರಿ ಉಮಾಶಂಕರ್ ಭಾರ್ಗವ್ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಮೊನಿಕ ಶುಕ್ಲ ದೌಡಾಯಿಸಿ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಬಸ್ನ್ನು ನೀರಿನಿಂದ ಹೊರತೆಗೆಯುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. (ಎಂ.ಎನ್)

 

 

Leave a Reply

comments

Related Articles

error: