ಪ್ರಮುಖ ಸುದ್ದಿಮೈಸೂರು

ಮಹಿಷ ದಸರಾ ಆಚರಣೆ ಬಿಡುವುದಿಲ್ಲ : ಹೋಟೆಲ್ ಮಾಲೀಕರ ಸಂಘ ಎಚ್ಚರಿಕೆ

ಸಂಸದ ಪ್ರತಾಪ್ ಸಿಂಹ ಬ್ಯಾಟಿಂಗ್

ಮೈಸೂರು,ಅ.4 : ಮಹಿಷ ದಸರಾ ಆಚರಣೆ ಹೆಸರಿನಲ್ಲಿ ಸಮಾಜದಲ್ಲಿ ಅಹಿತಕರ ಘಟನೆಗಳನ್ನು ಸೃಷ್ಟಿಸುವ ಮೂಲಕ ವಿಶ್ವವಿಖ್ಯಾತ ಮೈಸೂರು ದಸರಾಗೆ ಕಪ್ಪು ಚುಕ್ಕೆ ಮೂಡಿಸಲು ಕೆಲವರು ಪೂರ್ವ ನಿಯೋಜಿತ ಕಾರ್ಯಕ್ರಮ ರೂಪಿಸಿಕೊಂಡಿದ್ದು, ಅದನ್ನು ಈಡೇರಿಸಲು ಬಿಡುವುದಿಲ್ಲ ಎಂದು ಹೋಟೆಲ್ ಮಾಲೀಕರ ಸಂಘ ಹಾಗೂ ಸಂಘದ ಧರ್ಮದತ್ತಿಯು ಎಚ್ಚರಿಕೆ ನೀಡಿದೆ.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ ಮಾತನಾಡಿ, ನೂರಾರು ವರ್ಷಗಳ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪರಂಪರೆಯಲ್ಲಿ ಮಹಷಾಸುರ ಮರ್ಧಿನಿಯನ್ನು ಪೂಜಿಸಿ ಆರಾಧಿಸಲಾಗುತ್ತಿದೆ, ಈಚೆಗೆ ಕೆಲ ವರ್ಷಗಳಿಂದ ಸಮಾಜದ ಶಾಂತಿ ಕದಡುವ ಮೂಲಕ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಏಕೈಕ ಉದ್ದೇಶದಿಂದ ಮಹಿಷಾಸುರನ ಹೆಸರಿನಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಿಷಾ ಹಾಗೂ ಚಾಮುಂಡಿ ದಸರಾ ವಿವಾದಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಏರ್ಪಟ್ಟಿರುವ ಗೊಂದಲಗಳಿಂದ ಪ್ರವಾಸಿಗರು ಬರಲು ಭಯಭೀತರಾಗಲಿದ್ದು, ಇದರಿಂದ ಪ್ರವಾಸೋದ್ಯಮಕ್ಕೆ ಹಿನ್ನಡೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿ ಇಂತಹ ಘಟನೆಗಳಿಗೆ ಅವಕಾಶ ನೀಡದಂತೆ ಸರ್ಕಾರ ಈ ಕೂಡಲೇ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಉಪಾಧ್ಯಕ್ಷ ಎನ್.ಎಸ್.ಗೋಪಾಲಕೃಷ್ಣ, ಹೋಟೆಲ್ ಮಾಲೀಕರ ಸಂಘದ ಧರ್ಮದತ್ತಿ ಅಧ್ಯಕ್ಷ ರವಿಶಾಸ್ತ್ರಿ, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಆರ್.ತಂತ್ರಿ, ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಮು ಹಾಗೂ ಇತರರು ಹಾಜರಿದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: