ಕ್ರೀಡೆಪ್ರಮುಖ ಸುದ್ದಿಮೈಸೂರು

 ದಸರಾ ಮುಖ್ಯಮಂತ್ರಿ ಕಪ್ ಮೈಸೂರಿಗೆ ಸಮಗ್ರ ಪ್ರಶಸ್ತಿ : ಟ್ರೋಫಿ ವಿತರಣೆ

ಮೈಸೂರು,ಅ.4:-  ದಸರಾ ಮುಖ್ಯಮಂತ್ರಿ ಕಪ್ ನಲ್ಲಿ ಮೈಸೂರು ವಿಭಾಗ 203 ಅಂಕದೊಂದಿಗೆ ಸಮಗ್ರ ಚಾಂಪಿಯನ್ ಶಿಪ್ ಪಟ್ಟವನ್ನು ಪಡೆದಿದೆ.

ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಾಡಹಬ್ಬ ದಸರಾ ಮಹೋತ್ಸವ ಹಿನ್ನಲೆಯಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರ,
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದಸರಾ ಕ್ರೀಡಾ ಉಪ ಸಮಿತಿ ವತಿಯಿಂದ ಆಯೋಜಿಸಿದ್ದ ರಾಜ್ಯ ದಸರಾ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಮೈಸೂರು ವಿಭಾಗದ ಕ್ರೀಡಾಪಟುಗಳನ್ನು ಅಭಿನಂದಿಸಿ ಅವರಿಗೆ ಪ್ರಶಸ್ತಿ ಮತ್ತು ಟ್ರೋಪಿಯನ್ನು ವಿತರಿಸಲಾಯಿತು.

ರಾಜ್ಯ ದಸರಾ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಉದ್ಘಾಟಿಸಿ ಮಾತನಾಡಿ   ದಸರಾ ಮುಖ್ಯಮಂತ್ರಿ ಕ್ರೀಡಾಕೂಟವನ್ನು ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಲು ಮುಂದಿನ ದಿನಗಳಲ್ಲಿ ಹೊಸ ರೂಪ ನೀಡಿ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಬ್ಬಡಿ ಆಟಗಾರ್ತಿ ಉಷರಾಣಿ, ಚೆಸ್ ಆಟಗಾರರಾದ ಗಿರೀಶ್ ಕೌಶಿಕ್ ಹಾಗೂ ಸ್ಟ್ಯಾನಿ ಅವರನ್ನು ಸನ್ಮಾನಿಸಲಾಯಿತು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕ್ರೀಡಾಪಟುಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿ  ಸರ್ಕಾರದಿಂದ ಕ್ರೀಡಾಪಟುಗಳಿಗೆ ಬೆಂಬಲ ನೀಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಫಿಟ್ ಇಂಡಿಯಾ ಯೋಜನೆಯನ್ನು ತರಲು ಮುಂದಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕ್ರೀಡಾ ಇಲಾಖೆಯ ಡಾ.ಕಲ್ಪನಾ, ಮಹಾಪೌರರಾದ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪರಿಮಳ ಶ್ಯಾಂ, ದಸರಾ ಕ್ರೀಡಾ ಉಪ ಸಮಿತಿ ಅಧ್ಯಕ್ಷ ಜಗದೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

 

 

Leave a Reply

comments

Related Articles

error: