ಪ್ರಮುಖ ಸುದ್ದಿಮೈಸೂರು

ಅ.10ರಂದು ಮೈಸೂರು ಅರಮನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಭೇಟಿ

ಮೈಸೂರು,ಅ.5:-   ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಅ.10ರಂದು ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಅರಮನೆಯಲ್ಲಿ ಅಂದು ಸಂಜೆ ನಡೆಯುವ ಸಮಾರಂಭವೊಂದರಲ್ಲಿ ಭಾಗವಹಿಸಲಿದ್ದಾರೆ.

ಅ.11ರಂದು ಸುತ್ತೂರು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 104ನೇ ಜಯಂತಿ ಹಾಗೂ ಇದರ ಅಂಗವಾಗಿ ಹಮ್ಮಿಕೊಂಡಿರುವ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ನೂತನ ಕ್ಯಾಂಪಸ್‌ಗೆ   ಶಿಲಾನ್ಯಾಸ ನೆರವೇರಿಸಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: