ಮೈಸೂರು

ಯುವ ಜನರ ನಡಿಗೆ ರಸ್ತೆ ಸುರಕ್ಷತೆಯ ಕಡೆಗೆ ಜಾಥಾಕ್ಕೆ ಚಾಲನೆ

ಮೈಸೂರು ಜಿಲ್ಲಾಡಳಿತ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಯುವ ಜನರ ನಡಿಗೆ ರಸ್ತೆ ಸುರಕ್ಷತೆಯ ಕಡೆಗೆ ಎಂಬ ಘೋಷವಾಕ್ಯದಡಿ ರಸ್ತೆ ಸುರಕ್ಷತಾ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.
ಮೈಸೂರು ಓವೆಲ್ ಮೈದಾನದಲ್ಲಿ ಜಾಥಾಕ್ಕೆ  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಜಾಥಾದಲ್ಲಿ ಪಾಲ್ಗೊಂಡಿದ್ದ ಅಂತಾರಾಷ್ಟ್ರೀಯ ಕ್ರೀಡಾಪಟು ಅರ್ಜುನ್ ದೇವಯ್ಯ ರಸ್ತೆ ನಿಯಮಗಳನ್ನು ಉಲ್ಲಂಘನೆ ಮಾಡುವುದಿಲ್ಲ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಮಾನವೀಯತೆ ಮಾಯವಾಗುತ್ತಿದೆ. ಅಪಘಾತವಾದ ಸ್ಥಳದಲ್ಲಿ ಸೇರಿದ ಜನರು ಮೊದಲು ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ಸೇರಿಸುವುದು ಬಿಟ್ಟು ಸೆಲ್ಫಿ ತೆಗೆದುಕೊಳ್ಳುತ್ತಿರುತ್ತಾರೆ.  ಆದರೆ ಅದು ತಪ್ಪು. ಅಪಘಾತವಾದ ಸಮಯದಲ್ಲಿ ಚಿತ್ರೀಕರಣ ಮಾಡುವುದು, ಛಾಯಾಚಿತ್ರ ತೆಗೆಯುವುದು ಬಿಟ್ಟು ತೊಂದರೆಯಾದವರಿಗೆ ಸಹಾಯ ಮಾಡಿ ಎಂದರು. ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಿ, ಮೊಬೈಲ್ ನಲ್ಲಿ ಮಾತನಾಡುತ್ತಾ ವಾಹನ ಚಾಲನೆ ಮಾಡಬೇಡಿ ಎಂದರು.

ಮೈಸೂರಿನ ಓವೆಲ್ ಮೈದಾನದಿಂದ ಹೊರಟ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತ್ತೆ ಓವೆಲ್ ಮೈದಾನದಲ್ಲಿ ಮುಕ್ತಾಯಗೊಂಡಿತು. ಜಾಥಾದಲ್ಲಿ ಮೇಯರ್ ಎಂ.ಜೆ.ರವಿಕುಮಾರ್, ಜಿಲ್ಲಾಧಿಕಾರಿ ಡಿ.ರಂದೀಪ್, ಡಾ.ಸಿ.ಟಿ.ಮೂರ್ತಿ, ಉಪಮೇಯರ್ ರತ್ನ ಲಕ್ಷ್ಮಣ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

ಜಾಥಾದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಸೇರಿದಂತೆ ಸುಮಾರು 1500 ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.

Leave a Reply

comments

Related Articles

error: