ಕ್ರೀಡೆ

ದ್ವಿತೀಯ ಟೆಸ್ಟ್ ಗೆ ಟೀಂ ಇಂಡಿಯಾದ ಸಂಭಾವ್ಯ ಪಟ್ಟಿ

ಪುಣೆ,ಅ.9-ದಕ್ಷಿಣ ಆಫ್ರಿಕಾ ಹಾಗೂ ಟೀಂ ಇಂಡಿಯಾ ನಡುವೆ ಗುರುವಾರದಿಂದ ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣದಲ್ಲಿ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದೆ.

ಮೊದಲ ಟೆಸ್ಟ್‌ನಲ್ಲಿ ರೋಹಿತ್‌ ಶರ್ಮಾ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸಿದರೆ, ಮಯಾಂಕ್‌ ಅಗರ್ವಾಲ್‌ ಚೊಚ್ಚಲ ದ್ವಿಶತಕ ದಾಖಲಿಸಿ ತಂಡದ ಗೆಲುವಿನ ರೂವಾರಿಗಳಾದರು. ಮೊದಲ ಇನಿಂಗ್ಸ್‌ನಲ್ಲಿ ಅಶ್ವಿನ್‌ 5 ವಿಕೆಟ್‌ ಪಡೆದರೆ, ದ್ವಿತೀಯ ಇನಿಂಗ್ಸ್‌ನಲ್ಲಿ ವೇಗಿ ಮೊಹಮ್ಮದ್‌ ಶಮಿ 5 ವಿಕೆಟ್‌ ಮತ್ತು ಎಗೈ ಸ್ಪಿನ್ನರ್‌ ರವೀಂದ್ರ ಜಡೇಜಾ 4 ವಿಕೆಟ್‌ ಪಡೆದು ಮ್ಯಾಚ್‌ ವಿನ್ನರ್‌ಗಳೆನಿಸಿದರು.

ಚಾಂಪಿಯನ್‌ಷಿಪ್‌ ಆರಂಭಗೊಂಡ ಬಳಿಕ ಭಾರತ ಆಡಿರುವ 3 ಟೆಸ್ಟ್‌ಗಳಲ್ಲಿ ಎಲ್ಲವನ್ನೂ ಗೆದ್ದಿದ್ದು, ದಕ್ಷಿಣ ಆಫ್ರಿಕಾ ಎದುರಿನ ಇನ್ನುಳಿದ 2 ಪಂದ್ಯಗಳನ್ನೂ ಗೆದ್ದು ಅಗ್ರ ಪಟ್ಟವನ್ನು ಮತ್ತಷ್ಟು ಬಲ ಪಡಿಸಿಕೊಳ್ಳುವ ಕಡೆಗೆ ಎದುರು ನೋಡುತ್ತಿದೆ.

ಮತ್ತೊಂದೆಡೆ ಪ್ರಥಮ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಉತ್ತಮ ಹೋರಾಟ ಪ್ರದರ್ಶಿಸಿದರೂ ಎರಡನೇ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ವೈಫಲ್ಯ ಕಂಡು 191ಕ್ಕೆ ಆಲ್‌ಔಟ್‌ ಆಗಿ ನಿರಾಸೆ ಅನುಭವಿಸಿದ ದಕ್ಷಿಣ ಆಫ್ರಿಕಾ, ಇದೀಗ ಎರಡನೇ ಟೆಸ್ಟ್‌ ಗೆದ್ದು 1-1ರಲ್ಲಿ ಸರಣಿ ಸಮಬಲ ತಂದುಕೊಳ್ಳುವ ಕಡೆಗೆ ರಣತಂತ್ರ ರೂಪಿಸಿದೆ.

ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದ ಸಂಭಾವ್ಯ ಪಟ್ಟಿ ಹೀಗಿದೆ. ಮಯಾಂಕ್‌ ಅಗರ್ವಾಲ್‌, ರೋಹಿತ್‌ ಶರ್ಮಾ, ಚೇತೇಶ್ವರ್‌ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ವೃದ್ಧಿಮಾನ್‌ ಸಹಾ (ವಿಕೆಟ್‌ಕೀಪರ್), ರವೀಂದ್ರ ಜಡೇಜಾ, ಆರ್‌.ಅಶ್ವಿನ್‌, ಮೊಹಮ್ಮದ್‌ ಶಮಿ, ಇಶಾಂತ್‌ ಶರ್ಮಾ, ಉಮೇಶ್‌ ಯಾದವ್‌. (ಎಂ.ಎನ್)

 

Leave a Reply

comments

Related Articles

error: