ಸುದ್ದಿ ಸಂಕ್ಷಿಪ್ತ

ಶ್ರೀರಂಗಪಟ್ಟಣ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆರ ಹುದ್ದೆಗೆ ಅರ್ಜಿ ಆಹ್ವಾನ

ಮಂಡ್ಯ (ಅ.9): ಶ್ರೀರಂಗಪಟ್ಟಣ ತಾಲ್ಲೂಕು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 3 ಗ್ರಾಮಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಮತ್ತು 10 ಗ್ರಾಮಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 11 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. http://anganwadirecruit.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 2 ರಂದು ಕೊನೆ ದಿನ.

ಹುಣಸನಹಳ್ಳಿ, ನೆಲ್ಲೂರ್ ಫೈಲ್ (ಕೆ.ಆರ್.ಸಾಗರ), ಸಿದ್ದಾಪುರ (ಮಿನಿ ಅಂಗನವಾಡಿ ಕೇಂದ್ರ) ಗ್ರಾಮಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಖಾಲಿ ಇದೆ. ಮತ್ತು  ನೇರಲಕೆರೆ,ಬೆಟ್ಟಹಳ್ಳಿ, ಬೆಳಗೊಳ, ಬಸ್ತೀಪುರ, ಕೊಕ್ಕರೆಹುಂಡಿ, ಪಾಲಹಳ್ಳಿ, ದೊಡ್ಡಪಾಳ್ಯ, ದೇವರಗುಡ್ಡನ ಕೊಪ್ಪಲು, ಗಾಮನಹಳ್ಳಿ ಹಾಗೂ ಮಂಡ್ಯ ಕೊಪ್ಪಲು ಗ್ರಾಮಗಳಲ್ಲಿ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಖಾಲಿ ಇದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08236-295349ಗೆ ಸಂಪರ್ಕಿಸಬಹುದು.

(ಎನ್.ಬಿ)

Leave a Reply

comments

Related Articles

error: