ಸುದ್ದಿ ಸಂಕ್ಷಿಪ್ತ

ಮದ್ದೂರು ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಮಂಡ್ಯ (ಅ.9): ಮದ್ದೂರು ಪುರಸಭಾ ವ್ಯಾಪ್ತಿಯಲ್ಲಿ ವಿಕಲಚೇತನರು ಹಾಗೂ ನಾಗರೀಕರ ಸಬಲೀಕರಣ ಇಲಾಖೆಯ ಕಾರ್ಯಕ್ರಮವಾದ ನಗರ ಪುನರ್ವಸತಿ ಯೋಜನೆಯಡಿಯಲ್ಲಿ ಖಾಲಿ ಇರುವ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಯ ನೇಮಕಾತಿಗಾಗಿ ಪುರಸಭೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಪುರಸಭಾ ಕಛೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅಕ್ಟೋಬರ್ 15ರ ಸಂಜೆ 4ರ ಒಳಗೆ ಕಛೇರಿಗೆ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಪುರಸಭೆಯ ಅಂಗವಿಕಲ ಶಾಖೆಯ ಅಧಿಕಾರಿಗಳಾದ ಎನ್.ಉಮಾ ಅವರನ್ನು ಸಂಪರ್ಕಿಸಬಹುದು.

(ಎನ್.ಬಿ)

Leave a Reply

comments

Related Articles

error: