ಸುದ್ದಿ ಸಂಕ್ಷಿಪ್ತ

ವಿವಿಧ ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

ಮಂಡ್ಯ (ಅ.9): ಕೇಂದ್ರಿಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ ಮೈಸೂರು , ಭಾರತ/ ಕರ್ನಾಟಕ ಸರ್ಕಾರದ ಕೌಶಲ್ಯ ತರಬೇತಿಗಳ ವಿವಿಧ ಯೋಜನೆಯಡಿ ವಿವಿಧ ವೃತ್ತಿಪರ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವ ಯುವಕ ಯುವತಿಯರಿಗೆ ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪ್ಲಾಸ್ಟಿಕ್ಸ್ ಇಂಜಿಯರಿಂಗ್ ಅಂಡ್ ಟೆಕ್ನಾಲಾಜಿ ಸಂಸ್ಥೆಯಲ್ಲಿ ನಿರುದ್ಯೋಗ ಯುವಕರು/ಯುವತಿಯರಿಗೆ 3 ರಿಂದ 6 ತಿಂಗಳ ಉಚಿತ ತರಬೇತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ 7899986444, 9632688884 ಅಥವಾ 0821-2510619 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ. (ಎನ್.ಬಿ)

Leave a Reply

comments

Related Articles

error: