ದೇಶಪ್ರಮುಖ ಸುದ್ದಿ

ಅನಂತ ಪದ್ಮನಾಭಸ್ವಾಮಿ ದೇಗುಲದಲ್ಲಿ ಅಗ್ನಿ ಅವಘಡ

ತಿರುವನಂತಪುರ: ಅನಂತ ಪದ್ಮನಾಭಸ್ವಾಮಿ ದೇಗುಲದಲ್ಲಿ ಇಂದು (ಫೆ.26) ಅಗ್ನಿ ಅವಘಡ ಸಂಭವಿಸಿದ ಕಾರಣ ದೇವಾಲಯದ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ..

ದೇವಾಲಯದ ದಾಸ್ತಾನು ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಪಕ್ಕದಲ್ಲೇ ಇದ್ದ ದೇವಾಲಯದ ಕಚೇರಿಗೂ ಬೆಂಕಿ ಹಬ್ಬಿದ ಕಾರಣ ಕಚೇರಿಯ ದಾಖಲೆಗಳಿಗೆ ನಾಶವಾಗಿವೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಘಟನೆ ಸಂಬಂಧ ದೇವಾಲಯದ ಆಡಳಿತ ಮಂಡಳಿ ತನಿಖೆಗೆ ಆದೇಶಿಸಿದ್ದು, ಅಧಿಕಾರಿಗಳು ಈ ಅವಘಡದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಅಗ್ನಿ ಅವಘಡಕ್ಕೆ  ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆಯಾದರೂ ಗೋಡೌನ್ ಪಕ್ಕದಲ್ಲಿದ್ದ ಕಸದ ರಾಶಿಗೂ ಬೆಂಕಿ ತಗುಲಿ ಅದು ಗೋಡೌನ್ ಗೆ ತಗುಲಿರಬಹುದು ಎಂದೂ ಅಂದಾಜಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸತತ 2 ಗಂಟೆಗೂ ಅಧಿಕ ಸಮಯ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಕಿ ಬಿದ್ದಿರುವ ಗೋದಾಮಿನ್‌ನಲ್ಲಿ ಪೋಸ್ಟ್‌ ಆಫೀಸ್‌ನ ಹಳೆ ಬ್ಯಾಗ್‌ಗಳನ್ನು ಇಡಲು ಬಳಕೆಯಾಗುತ್ತಿದೆ. ಇಂದು ಬೆಳಗಿನ ಜಾವ 3 ಗಂಟೆ ಸರಿ ಸುಮಾರಿನಲ್ಲಿ ಗೋದಾಮಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ಮುಟ್ಟಿಸಿದ್ದಾರೆ. ಈ ವೇಳೇ  ಸ್ಥಳಕ್ಕೆ ಆಗನಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.

ಒಟ್ಟು 15 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಸತತ ಮೂರು ಗಂಟೆಗಳ ಕಾಲ ಬೆಂಕಿ ನಂದಿಸಿದ ಅಗ್ನಿಶಾಮಕದಳ, ಬೆಂಕಿ ಹತೋಟಿಗೆ ತರಲು ಯಶಸ್ವಿಯಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇನ್ನೂ ಗೋದಾಮು ಪಕ್ಕದಲ್ಲೇ ಪೆಟ್ರೋಲ್‌ ಬಂಕ್‌ ಇದ್ದು, ಸಮಯಕ್ಕೆ ಸರಿಯಾಗಿ ಬೆಂಕಿ ನಂದಿಸುವ ಕಾರ್ಯಾಚರಣೆ ಶುರುವಾಗಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಬೆಂಕಿ ಬಿದ್ದ ಗೋದಾಮು ಸಂಪೂರ್ಣವಾಗಿ ಹಾನಿಯಾಗಿದ್ದು, ಇದರ ಪಕ್ಕದಲ್ಲೇ ಇರುವ ಇನ್ನೆರಡು ಗೋದಾಮುಗಳು ನಾಶವಾಗಿದೆ.

Leave a Reply

comments

Related Articles

error: