ಸುದ್ದಿ ಸಂಕ್ಷಿಪ್ತ

ಅ.11 ರಂದು ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನ

ಹಾಸನ (ಅ.9): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಮಾನಸಿಕ ಆರೋಗ್ಯ ವಿಭಾಗ) ಹಿಮ್ಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಾಸನಾಂಬ ಲಯನ್ಸ್ ಕ್ಲಬ್ ಇವರುಗಳ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಅ.11 ರಂದು ಬೆಳಿಗ್ಗೆ 10:30ಕ್ಕೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಗಂಧದ ಕೋಠಿ (ನೂತನ) ಇಲ್ಲಿ ಆಯೋಜಿಸಲಾಗಿದೆ.

ಹಿರಿಯ ಸಿವಿಲ್ ನ್ಯಾಯಾದೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಕೆ ಬಸವರಾಜ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು ಗಂಧದ ಕೋಠಿ (ನೂತನ) ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುಲೋಚನ ಹೆಚ್.ಆರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.

ಮುಖ್ಯ ಅಥಿತಿಗಳಾಗಿ ವಕೀಲರ ಸಂಘದ ಅಧ್ಯಕ್ಷರು ಹಾಗೂ ಹಾಸನಾಂಬ ಲಯನ್ಸ್ ಕ್ಲಬ್ ನ ಜಿಲ್ಲಾ ಸಂಯೋಜಕರಾದ ಜೆ.ಪಿ ಶೇಖರ್, ವಕೀಲರ ಸಂಘದ ಉಪಾದ್ಯಕ್ಷರಾದ ಸುರೇಶ್ ಕಟ್ಟಾಯ, ವಕೀಲರ ಸಂಘದ ಕಾರ್ಯದರ್ಶಿ ಕಾರ್ಲೆ ಮೊಗಣ್ಣ, ವಕೀಲರ ಸಂಘದ ಖಜಾಂಚಿ ಲೋಹಿತಾಶ್ವ ಡಿ.ಆರ್ ಮತ್ತಿತರರು ಭಾಗವಹಿಸಲಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನಿವೃತ್ತ ಉಪ ನಿರ್ದೇಶಕರಾದ ವಿ.ಗೀತ ಅವರು ಹೆಣ್ಣು ಮಕ್ಕಳ ಸಂರಕ್ಷಣಾ ಕಾನೂನುಗಳ ಕುರಿತು ಉಪನ್ಯಾಸ ನೀಡಲಿದ್ದಾರೆ. (ಎನ್.ಬಿ)

Leave a Reply

comments

Related Articles

error: