ಸುದ್ದಿ ಸಂಕ್ಷಿಪ್ತ

ಅ.10 ರಂದು ಮಾನಸಿಕ ಆರೋಗ್ಯ ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ

ಹಾಸನ (ಅ.9): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ( ಮಾನಸಿಕ ಆರೋಗ್ಯ ವಿಭಾಗ) ಹಿಮ್ಸ್, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹಾಗೂ ಹಾಸನಾಂಬ ಲಯನ್ಸ್ ಕ್ಲಬ್ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಅ.10 ರಂದು ಬೆಳಿಗ್ಗೆ 10 ಗಂಟೆಗೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಹಿರಿಯ ಸಿವಿಲ್ ನ್ಯಾಯಾದೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಕೆ ಬಸವರಾಜ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಓಬಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.

ಮುಖ್ಯ ಅಥಿತಿಗಳಾಗಿ ವಕೀಲರ ಸಂಘದ ಅಧ್ಯಕ್ಷರು ಹಾಗೂ ಹಾಸನಾಂಬ ಲಯನ್ಸ್ ಕ್ಲಬ್ ನ ಜಿಲ್ಲಾ ಸಂಯೋಜಕರಾದ ಜೆ.ಪಿ ಶೇಖರ್, ವಕೀಲರ ಸಂಘದ ಕಾರ್ಯದರ್ಶಿ ಕಾರ್ಲೆ ಮೊಗಣ್ಣ, ಸರ್ಕಾರಿ ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕರಾದ ಡಾ.ಭಾರತಿ, ಮನೋವೈಧ್ಯಕೀಯ ವಿಭಾಗದ ಪ್ರಾಧ್ಯಾಪಕರಾದ ಡಾ.ಪುನೀತ್ ಮತ್ತಿತರರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಮನೋವೈದ್ಯರಾದ ಡಾ.ಸುನಿತಾ ಅವರು ವಿಶ್ವ ಮಾನಸಿಕ ಆರೋಗ್ಯ ದಿನದ ಮಹತ್ವದ ಕುರಿತು ಉಪನ್ಯಾಸ ನೀಡಲಿದ್ದಾರೆ. (ಎನ್.ಬಿ)

Leave a Reply

comments

Related Articles

error: