ಪ್ರಮುಖ ಸುದ್ದಿ

‘ಬಿಗ್ ಬಾಸ್ 13 ಪ್ರಸಾರವನ್ನು ತಕ್ಷಣವೇ ಸ್ಥಗಿತಗೊಳಿಸಿ’ : ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದ ಬಿಜೆಪಿ ಶಾಸಕ

ದೇಶ(ನವದೆಹಲಿ)ಅ.10:-  ಖಾಸಗಿ ವಾಹಿನಿಯಲ್ಲಿ  ಪ್ರಸಾರವಾಗಲಿರುವ ರಿಯಾಲಿಟಿ ಶೋ’ ಬಿಗ್ ಬಾಸ್ 13’ ಕುರಿತ ವಿವಾದ ಹೆಚ್ಚುತ್ತಿದ್ದು, ಈಗ ಬಿಜೆಪಿ ಶಾಸಕರೊಬ್ಬರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಗ್ ಬಾಸ್ ಪ್ರದರ್ಶನದಿಂದ ಸಾಂಸ್ಕೃತಿಕ ಮತ್ತು ಸಾಮಾಜಿಕ ಮೌಲ್ಯಗಳಿಗೆ ಹಾನಿಯಾಗಿದೆ ಎಂದು ಹೇಳಿದ್ದು,   ಪ್ರಸಾರವನ್ನು ತಕ್ಷಣವೇ ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ. ಗಾಜಿಯಾಬಾದ್‌ನ ಲೋನಿ ಸ್ಥಾನದ ಬಿಜೆಪಿ ಶಾಸಕ ನಂದ್ ಕಿಶೋರ್ ಗುರ್ಜಾರ್ ಅವರು ಕಾರ್ಯಕ್ರಮ ಪ್ರಸಾರವನ್ನು ನಿಲ್ಲಿಸುವಂತೆ ಮಾಹಿತಿ ಮತ್ತು ಪ್ರಸಾರ ಸಚಿವ (ಐಟಿ ಸಚಿವ) ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದಿದ್ದಾರೆ. ಗುರ್ಜರ್ ತಮ್ಮ ಪತ್ರದಲ್ಲಿ ಕಾರ್ಯಕ್ರಮದ ಪ್ರಸಾರವನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.   ಈ ಕಾರ್ಯಕ್ರಮವನ್ನು ಅಸಭ್ಯ ಮತ್ತು ದೇಶದ ಸಾಮಾಜಿಕ ನೈತಿಕತೆಗೆ ಧಕ್ಕೆ ತರುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ಶಾಸಕ ಮಾಹಿತಿ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದಿದ್ದು, ‘ಕಾರ್ಯಕ್ರಮವನ್ನು ಪ್ರೈಮ್ ಟೈಮ್ ಸ್ಲಾಟ್‌ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇದರಲ್ಲಿ  ಅಶ್ಲೀಲತೆಯನ್ನು ಬಹಿರಂಗವಾಗಿ ಪ್ರದರ್ಶಿಸಲಾಗುತ್ತಿದೆ.  ಈ ಪ್ರದರ್ಶನದ ಸ್ಥಿತಿ ಹೇಗಿದೆಯೆಂದರೆ ಕುಟುಂಬದವರೆಲ್ಲ ಕುಳಿತು ನೋಡುವುದು ಸಹ ಕಷ್ಟ.

‘ದೇಶದ ಸಾಂಪ್ರದಾಯಿಕ ಮತ್ತು ಐತಿಹಾಸಿಕ , ಸಾಮಾಜಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳು ಹಾಳಾಗುವ ರೀತಿಯಲ್ಲಿ ಕಾರ್ಯಕ್ರಮದ ವಿಷಯವನ್ನು ಸಿದ್ಧಪಡಿಸಲಾಗಿದೆ’ ಎಂದು   ಪತ್ರದಲ್ಲಿ ಬರೆದಿದ್ದಾರೆ ಎನ್ನಲಾಗಿದೆ. (ಎಸ್.ಎಚ್)

Leave a Reply

comments

Related Articles

error: