ಕರ್ನಾಟಕ

ಮಕ್ಕಳ ರಕ್ಷಣಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

ಮಂಡ್ಯ (ಅ.10) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಡ್ಯ ವ್ಯಾಪ್ತಿಯಲ್ಲಿ ಖಾಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಪತ್ರಾಂಕಿತ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ 65 ವರ್ಷ ಒಳಪಟ್ಟ ಅಧಿಕಾರಿಗಳು ಅಕ್ಟೋಬರ್ 24 ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08232-223222 ಗೆ ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: