ಸುದ್ದಿ ಸಂಕ್ಷಿಪ್ತ

ಅಂಗನವಾಡಿ ಅರ್ಜಿ: ಆಕ್ಷೇಪಣೆ ಸಲ್ಲಿಕೆಗೆ ಅ.16 ಕೊನೆ ದಿನ

ಹಾಸನ (ಅ.10): ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ದಿ ಯೋಜನೆ ಆಲೂರು ತಾಲ್ಲೂಕು ವ್ಯಾಪ್ತಿಯಲ್ಲಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಸದರಿ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ ಸಮಿತಿ ಆಲೂರು ಮತ್ತು ಸಮಿತಿಯ ಸದಸ್ಯರು ಸಭೆ ಸೇರಿ ಸೆಪ್ಟೆಂಬರ್ 26 ರಂದು ಆಯ್ಕೆ ಮಾಡಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ತಾತ್ಕಲಿಕ ಆಯ್ಕೆ ಪಟ್ಟಿಯನ್ನು ಆಲೂರಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ.

ಆಕ್ಷೇಪಣೆ ಸಲ್ಲಿಸುವವರು ಅಕ್ಟೋಬರ್ 16 ರ ಸಂಜೆ 5.30 ಗಂಟೆ ಒಳಗೆ ಲಿಖಿತವಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಆಲೂರು ಇವರಿಗೆ ಸಲ್ಲಿಸಬಹುದಾಗಿರುತ್ತದೆ ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: