ಮೈಸೂರು

ಮುತ್ತೂರು ಗ್ರಾಮದ ಅರಣ್ಯದಂಚಿನಲ್ಲಿ ಕಾಡಾನೆ ದಾಳಿ : ರೈತರ ಅಪಾರ ಪ್ರಮಾಣದ ಬೆಳೆ ನಾಶ

ಮೈಸೂರು,ಅ.11:- ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಮುತ್ತೂರು ಗ್ರಾಮದ ಅರಣ್ಯದಂಚಿನಲ್ಲಿ ಕಾಡಾನೆ ದಾಳಿಗೆ ರೈತರ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಕಾಡುಪ್ರಾಣಿಗಳ ಹಾವಳಿ ತಪ್ಪಿಸಲು ಅರಣ್ಯಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿರಿಯಾಪಟ್ಟಣ ತಾಲೂಕು ಮುತ್ತೂರು ಗ್ರಾಮದಲ್ಲಿ ಆನೆ ದಾಳಿಯಿಂದ ರೈತರು ಕಂಗಾಲಾಗಿದ್ದಾರೆ.  ಆನೆ ಹಾವಳಿಯಿಂದ ಬೆಳೆ ನಾಶವಾಗಿ ನೂರಾರು ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ರೈತರು ಬೆಳೆದ ಅಪಾರ ಪ್ರಮಾಣದ ಭತ್ತ, ರಾಗಿ ಶುಂಠಿ ಬೆಳೆ ನಾಶವಾಗಿದ್ದು, ಗ್ರಾಮದ ಅರಣ್ಯದಂಚಿನಲ್ಲಿ ಆನೆ ದಾಳಿ ತಪ್ಪಿಸಲು ಅವೈಜ್ಞಾನಿಕ ಆನೆ ಕಂದಕ ನಿರ್ಮಾಣ ಮಾಡಿದ್ದರೂ ಸಹ ಆನೆ ದಾಳಿ ಮುಂದುವರಿದಿದೆ.

ಕಾಡು ಪ್ರಾಣಿಗಳ ಉಪಟಳಕ್ಕೆ  ಬೇಸತ್ತ ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ.  ಆನೆ ದಾಳಿಯಿಂದ ನೂರಾರು ಎಕರೆ ಬೆಳೆ ನಾಶವಾದರೂ ಅರಣ್ಯಾಧಿಕಾರಿಗಳು ಮಾತ್ರ ಮೂಕ ಪ್ರೇಕ್ಷಕರಂತೆ ಕೈ ಕಟ್ಟಿ ಕುಳಿತಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: