ಮೈಸೂರು

ಸೆಪ್ಟೆಂಬರ್ 26:ಬೃಹತ್ ಪ್ರತಿಭಟನಾ ಮೆರವಣಿಗೆ

ದಲಿತ ಸಂಘರ್ಷ ಸಮಿತಿ ವತಿಯಿಂದ ಸೆಪ್ಟೆಂಬರ್ 26ರಂದು ಬೆಳಿಗ್ಗೆ 11.30ಕ್ಕೆ ಶೋಷಿತ, ತಳಸಮುದಾಯವನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲವಾದ ರಾಜ್ಯಸರ್ಕಾರದ ವಿರುದ್ಧ ಮೈಸೂರಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.

ಹುಣಸೂರು, ಹೆಗ್ಗಡದೇವನಕೋಟೆ, ನಂಜನಗೂಡು, ನರಸೀಪುರ, ಮೈಸುರು ತಾಲೂಕುಗಳಲ್ಲಿ ಸಾರ್ವಜನಿಕರ ಆಸ್ತಿ, ದಲಿತರ ಭೂಮಿ, ಸ್ಮಶಾನ, ಕೆರೆಕುಂಟೆ, ಗೋಮಾಳಗಳು ಪ್ರಭಾವಿಗಳ ಪಾಲಾಗುತ್ತಿದ್ದು ಸರ್ಕಾರ  ಅದನ್ನು ರಕ್ಷಿಸುವ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ ತಿಳಿಸಿದ್ದಾರೆ.

Leave a Reply

comments

Tags

Related Articles

error: