ಮೈಸೂರು

ಗ್ರೇಡ್-3 ಪೊಲೀಸ್ ಠಾಣಾ ಕಟ್ಟಡಗಳಿಗೆ ಶಂಕುಸ್ಥಾಪನೆ

ಮೈಸೂರು  ಜಿಲ್ಲಾ ಪೊಲೀಸ್ ಹಾಗೂ ಕ.ರಾ.ಪೊ.ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ  ನಿಗಮ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ  ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಿಳಿಗೆರೆ ಮತ್ತು ಮೈಸೂರು ಜಿಲ್ಲೆಯ ಮೈಸೂರು ತಾಲೂಕಿನ ವರುಣಾ ಪೊಲೀಸ್ ಠಾಣೆ (ಮೇಗಳಾಪುರ) ಗಳಲ್ಲಿ ನೂತನವಾಗಿ  ನಿರ್ಮಿಸಲು ಉದ್ದೇಶಿಸಿರುವ ಗ್ರೇಡ್-3 ಪೊಲೀಸ್ ಠಾಣಾ ಕಟ್ಟಡಗಳಿಗೆ ಭಾನುವಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಇಲ್ಲಿನ ಕ್ಷೇತ್ರ ದೊಡ್ಡದಾಗಿರುವುದರಿಂದ ಮೊದಲೇ ಸರ್ಕಾರವನ್ನು ಪೊಲೀಸ್ ಠಾಣಾ ನಿರ್ಮಾಣದ ಕುರಿತು ಕೇಳಲಾಗಿತ್ತು. ಸರ್ಕಾರ ಅದಕ್ಕೆ ಅನುಮತಿ ನೀಡಿದೆ ಎಂದರು. ಕಾನೂನನ್ನು  ಯಾರು ಗೌರವಿಸುತ್ತಾರೋ ಅವರನ್ನು ಕಾನೂನು ಕೂಡ ಗೌರವಿಸುತ್ತದೆ, ಸಾರ್ವಜನಿಕರ ಸಹಕಾರ ಇಲ್ಲದಿದ್ದಲ್ಲಿ ಯಾವ ಕಾನೂನುಗಳು ಸಮರ್ಪಕವಾಗಿ ಅನುಷ್ಠಾನಕ್ಕೆ ಬರುವುದಿಲ್ಲ ಎಂದು ಹೇಳಿದರು.

ಸಂಸದ ಆರ್.ಧ್ರುವನಾರಾಯಣ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಯೀಮಾ ಸುಲ್ತಾನಾ, ಜಿಲ್ಲಾ ಪಂಚಾಯತ್ ಸದಸ್ಯೆ ಭಾಗ್ಯ, ದಕ್ಷಿಣ ವಲಯ ಐಜಿಪಿ ವಿಪುಲ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚೆನ್ನಣ್ಣನವರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಲಾ ಕೃಷ್ಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: