ದೇಶ

ಸಿಲಿಂಡರ್ ಸ್ಫೋಟ: ಕಟ್ಟಡ ಕುಸಿದು 10 ಮಂದಿ ದುರ್ಮರಣ

ಲಕ್ನೋ,ಅ.14-ಸಿಲಿಂಡರ್ ಸ್ಫೋಟಗೊಂಡು ಮನೆ ಕುಸಿದು ಬಿದ್ದ ಪರಿಣಾಮ ಹತ್ತು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶ ಮೌ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಮೌ ಜಿಲ್ಲೆಯ ಮೊಹಮ್ಮದಾಬಾದ್ ಪ್ರದೇಶದಲ್ಲಿನ ಎರಡು ಅಂತಸ್ತಿನ ಮನೆಯೊಳಗೆ ಸಿಲಿಂಡರ್ ಸ್ಫೋಟಗೊಂಡ ರಭಸಕ್ಕೆ ಮನೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಹತ್ತು ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಅಲ್ಲದೆ, ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆ ತಂಡ ಸ್ಥಳದಲ್ಲಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣೆ ಕಾರ್ಯದಲ್ಲಿ ತೊಡಗಿದೆ. ಸಂತ್ರಸ್ತರಿಗೆ ಸೂಕ್ತ ಸಹಾಯ ಒದಗಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: