ಮೈಸೂರು

ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿ ಮೆಚ್ಚುಗೆಗಳಿಸಿದ ವಿಜೇತ ತಂಡಕ್ಕೆ ಪ್ರಶಸ್ತಿ ವಿತರಣೆ

ಮೈಸೂರು,14:-  ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ನಡೆದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿ ಮೆಚ್ಚುಗೆಗಳಿಸಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಪಡೆದ ಸ್ತಬ್ಧಚಿತ್ರ  ತಂಡಕ್ಕೆ ಬಹುಮಾನ ವಿತರಿಸಲಾಯಿತು.

ಚಾಮರಾಜನಗರ ಜಿಲ್ಲೆಯ “ಸಮೃದ್ಧಿ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣ” ವಿಷಯ ಆಧಾರಿತ ಸ್ತಬ್ಧ ಚಿತ್ರ  ಪ್ರಥಮ ಬಹುಮಾನ ಪಡೆದಿದ್ದು, ಇಂದು ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸ್ಮರಣಿಕೆ, ಪ್ರಶಸ್ತಿಪತ್ರ, ನಗದು ನೀಡಿ ಪುರಸ್ಕರಿಸಲಾಯಿತು. ಅದೇ ರೀತಿ ಉತ್ತರ ಕನ್ನಡ ಜಿಲ್ಲೆಯ “ಕದಂಬ/ಬನವಾಸಿ ” ವಿಷಯ ಆಧಾರಿತ ಸ್ತಬ್ಧ ಚಿತ್ರಕ್ಕೆ ದ್ವೀತಿಯ ಬಹುಮಾನ ಹಾಗೂ ತುಮಕೂರು ಜಿಲ್ಲೆಯ “ನಡೆದಾಡುವ ದೇವರು” ವಿಷಯ ಆಧಾರಿತ ಸ್ತಬ್ಧಚಿತ್ರಕ್ಕೆ ತೃತೀಯ ಬಹುಮಾನ ಲಭಿಸಿದ್ದು ಅವರಿಗೂ ಸ್ಮರಣಿಕೆ, ಪ್ರಶಸ್ತಿಪತ್ರ, ನಗದು ನೀಡಿ ಪುರಸ್ಕರಿಸಲಾಯಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ “ಸರ್ಕಾರದ ಸೌಲಭ್ಯಗಳ ಮಾಹಿತಿ” ವಿಷಯ ಆಧಾರಿತ ಸ್ತಬ್ಧಚಿತ್ರವು ಶಿವಮೊಗ್ಗ ಜಿಲ್ಲೆಯ “ಫಿಟ್ ಇಂಡಿಯಾ” ಹಾಗೂ ಚಿಕ್ಕಮಗಳೂರು ಜಿಲ್ಲೆಯ “ಶಿಶಿಲ ಬೆಟ್ಟ” ವಿಷಯ ಆಧಾರಿತ ಸ್ತಬ್ಧಚಿತ್ರಗಳೊಂದಿಗೆ ಸಮಾಧಾನಕರ ಬಹುಮಾನವನ್ನು ಹಂಚಿಕೊಂಡಿದ್ದು, ಅವುಗಳಿಗೂ ಸ್ಮರಣಿಕೆ, ಪ್ರಶಸ್ತಿಪತ್ರ, ನಗದು ನೀಡಿ ಪುರಸ್ಕರಿಸಲಾಯಿತು.

ಈ ಸಂದರ್ಭ ಜಿಲ್ಲಾ ಪಂಚಾಯತ್ ಸಿಇಒ ಕೆ.ಜ್ಯೋತಿ, ಅಧ್ಯಕ್ಷೆ ಪರಿಮಳ ಶ್ಯಾಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಯಲ್ಲಿ 30 ಜಿಲ್ಲೆಗಳು ಸೇರಿದಂತೆ 38 ಸ್ತಬ್ಧ ಚಿತ್ರಗಳು ಭಾಗಿಯಾಗಿದ್ದವು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: