ಸುದ್ದಿ ಸಂಕ್ಷಿಪ್ತ

ಪಿ.ಸಿ ಮತ್ತು ಪಿಎಸ್‍ಐ ಪರೀಕ್ಷೆಗಳಿಗೆ ಉಚಿತ ತರಬೇತಿ

ಮೈಸೂರು,ಅ.14:- ಜ್ಞಾನಬುತ್ತಿ ಸಂಸ್ಥೆ ವತಿಯಿಂದ  ಕರ್ನಾಟಕ ಸರ್ಕಾರವು ನಡೆಸಲು ಉದ್ದೇಶಿಸಿರುವ ಪೊಲೀಸ್ ಕಾನ್ಸಟೇಬಲ್ ಮತ್ತು ಪೊಲೀಸ್ ಸಬ್ ಇನ್ಸಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿಯನ್ನು ನೀಡಲು ನಿರ್ಧರಿಸಿದೆ.

ಆಸಕ್ತರು   19.10.2019 ರೊಳಗಾಗಿ ಪ್ರತಿದಿನ ಸಂಜೆ 5.30ರಿಂದ 7.30ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ  ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಸಂಸ್ಥೆಯ ಕಾರ್ಯದರ್ಶಿ ಹೆಚ್. ಬಾಲಕೃಷ್ಣ (9448117455) ಕೋರಿದ್ದಾರೆ.

ಹೆಚ್ಚಿನ ವಿವರಗಳಿಗೆ ಸಿ.ಕೆ.ಕಿರಣ್‍ಕೌಶಿಕ್(9972830857) ಮತ್ತು ಡಾ. ನಾಗಾಚಾರಿ(9844002517)ಸಂಪರ್ಕಿಸಲು ಕಾರ್ಯದರ್ಶಿ ಹೆಚ್.ಬಾಲಕೃಷ್ಣ ಕೋರಿದ್ದಾರೆ. (ಎಸ್.ಎಚ್)

Leave a Reply

comments

Related Articles

error: