ಮೈಸೂರು

ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

ಮೈಸೂರು ಅ.14 : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾವಂತ ಬಡ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿಶೇಷ ಘಟಕ ಗಿರಿಜನ ಉಪ ಯೋಜನೆಯಡಿ ಅಲ್ಪಾವಧಿ ಉಚಿತ ಕೌಶಲ್ಯ ತರಬೇತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಎಸ್‍ಎಸ್‍ಎಲ್‍ಸಿ, ಡಿಪ್ಲೊಮಾ ಹಾಗೂ ಐ.ಟಿ.ಐ (Mech, IP, Tool & Diemaking, Precession Manufacturing) ಪಾಸಾದ ಅಭ್ಯರ್ಥಿಗಳಿಗೆ ಟರ್ನರ್, ಮಿಲ್ಲರ್, ಗ್ರೈಂಡರ್, ಕ್ಯಾಡ್ ಕ್ಯಾಂ, ಟೂಲ್ ರೂಂ ಮೆಷಿನಿಸ್ಟ್, ಪೋಸ್ಟ್ ಡಿಪ್ಲೊಮಾ ಇನ್ ಟೊಲ್ ಡಿಸೈನ್ ಗಳಲ್ಲಿ ಉಚಿತ ತರಬೇತಿ ನೀಡಲಾಗುವುದು.
ಆಸಕ್ತ ಅರ್ಹ ಅಭ್ಯರ್ಥಿಗಳು http://www.kaushalkar.com ವೆಬ್‍ಸೈಟ್‍ನಲ್ಲಿ ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2582750, 9141629598,  9945442654, 9141630315 ಅಥವಾ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ , ಪ್ಲಾಟ್ ನಂ.93,94 ಬೆಳಗೋಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರೋಡ್ ಮೈಸೂರು-570016 ಸಂಪರ್ಕಿಸುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: