ಮೈಸೂರು

ಬಿಎಸ್ ವೈ ಜನ್ಮದಿನ : ಲೋಕ ಕಲ್ಯಾಣಾರ್ಥವಾಗಿ ಬಿಜೆಪಿ ಕಾರ್ಯಕರ್ತರಿಂದ ಹೋಮಹವನ

ಮಂಡ್ಯದ ರೈಲ್ವೆ ನಿಲ್ದಾಣದ ಬಳಿ ಇರುವ ಮಾರುತಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಹಾಗೂ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಪ್ರಯುಕ್ತ ಹೋಮ-ಹವನಾದಿಗಳನ್ನು ನಡೆಸಲಾಯಿತು.

ಬಿ.ಎಸ್.ಯಡಿಯೂರಪ್ಪನವರು ಈ ಹಿಂದೆಯೇ  ನನ್ನ ಜನ್ಮದಿನವನ್ನು ಯಾವುದೇ ಕಾರಣಕ್ಕೂ ಅನಗತ್ಯ ಖರ್ಚುಗಳಿಂದ ಮಾಡಬೇಡಿ. ರಾಜ್ಯದಲ್ಲಿ ಬರಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯೋದಕ್ಕೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜಾನುವಾರುಗಳಿಗೆ ಮೇವಿಲ್ಲವಾಗಿದೆ. ಇಂಥಹ ಸಂದರ್ಭದಲ್ಲಿ ನನ್ನ ಜನ್ಮದಿನದ ಹೆಸರಿನಲ್ಲಿ ದುಂದು ವೆಚ್ಚ ಮಾಡದಿರಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದರು. ಅದರಂತೆ ಬಿಜೆಪಿ ಕಾರ್ಯಕರ್ತರೂ ನಡೆದುಕೊಂಡಿದ್ದು, ಮಾರುತಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಹೋಮಹವನಾದಿಗಳನ್ನು ನಡೆಸಿದರು. ಈ ಸಂದರ್ಭ ಮಾತನಾಡಿದ ಕಾರ್ಯಕರ್ತರು ರಾಜ್ಯದಲ್ಲಿ ಬಂದಿರುವ ಬರ ನಿವಾರಣೆಯಾಗಬೇಕು. ರೈತರ ನಿರಂತರ ಆತ್ಮಹತ್ಯೆ ನಿಲ್ಲಬೇಕು.  ಜಾನುವಾರುಗಳಿಗೆ ಮೇವು ಸಿಗಬೇಕು. ಉತ್ತಮವಾಗಿ ಮಳೆಬೆಳೆಯಾಗಬೇಕೆನ್ನುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ನೂರಾರು ಬಿಜೆಪಿ ಕಾರ್ಯಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.

Leave a Reply

comments

Related Articles

error: