ಮೈಸೂರು

ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿದ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ತೆಪ್ಪೋತ್ಸವ

ಮೈಸೂರು, ಅ.16:-   ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ತೆಪ್ಪೋತ್ಸವ ಚಾಮುಂಡಿ ಬೆಟ್ಟದ ದೇವಿಕೆರೆಯಲ್ಲಿ ನಿನ್ನೆ  ರಾತ್ರಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ತೆಪ್ಪೋತ್ಸವದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ನಾನಾ ಪೂಜಾ ಕೈಂಕರ್ಯಗಳು ನಡೆದವು. ಸಂಜೆ 7.45ಕ್ಕೆ ಚಾಮುಂಡಿ ಬೆಟ್ಟದ ದೇವಿಕೆರೆಯಲ್ಲಿ ಸಂಪ್ರದಾಯ ದಂತೆ ಶಾಸ್ತ್ರೋಕ್ತವಾಗಿ ತೆಪ್ಪೋತ್ಸವ  ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.

ದೇವಾಲಯದ ಕೆಳ ಆವರಣದಲ್ಲಿರುವ ದೇವಿಕೆರೆಯಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಆರಾಧನೆ ಮಾಡಲಾಯಿತು. ನೂರಾರು ಮಂದಿ ಈ ಅವಿಸ್ಮರಣೀಯ ಕ್ಷಣಗಳನ್ನು ಕಣ್ತುಂಬಿಕೊಂಡರು. ವಿದ್ಯುತ್‌ ದೀಪಾಲಂಕಾರದಿಂದ ಅಲಂಕೃತಗೊಂಡಿದ್ದ ತೆಪ್ಪ ದಲ್ಲಿ ದೇವಿಯ ಮೂರ್ತಿಯನ್ನಿಟ್ಟು ದೇವಿಕೆರೆಯಲ್ಲಿ ಮೂರು ಸುತ್ತು ಪ್ರದಕ್ಷಿಣೆ ನಡೆಸಲಾಯಿತು. ತೆಪ್ಪೋ ತ್ಸವದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿಗೆ ವಿವಿಧ ಆಭರಣಗಳಿಂದ ಅಲಂಕರಿಸಲಾಗಿತ್ತು. ಕುಶಾಲುತೋಪು ಸಿಡಿಸಿ ದೇವಿಗೆ ಗೌರವ ಸಲ್ಲಿಸಲಾಯಿತು. ದೇಗುಲದ ಪ್ರಧಾನ ಅರ್ಚಕರಾದ ಶಶಿಶೇಖರ ದೀಕ್ಷಿತ್‌ ನೇತೃತ್ವದಲ್ಲಿ ತೆಪ್ಪೋತ್ಸವದ ಎಲ್ಲಾ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು.

ಸಂಜೆ 7 ಗಂಟೆ ವೇಳೆಗೆ ಬೆಟ್ಟದಲ್ಲಿ ತೆಪ್ಪೋತ್ಸವಕ್ಕೆ ಸಿದ್ಧತೆ ಆರಂಭವಾಗುತ್ತಿದ್ದಂತೆ ಶುಭ ಸೂಚಕವೆಂಬಂತೆ ಮಳೆ ಆರಂಭವಾಯಿತು. ಹೀಗಾಗಿ ಈ ಧಾರ್ಮಿಕ ಆಚರಣೆಯಲ್ಲಿ ತೊಡಗಿಸಿ ಕೊಳ್ಳಬೇಕಾದವರು 45 ನಿಮಿಷ ಅತ್ತಿತ್ತ ಕದಲದಂತಾ ಯಿತು. ಅಂತೆಯೇ 7 ಗಂಟೆಗೆ ಆರಂಭವಾಗಬೇಕಾದ ತೆಪ್ಪೋತ್ಸವ ಕಾರ್ಯಕ್ರಮದಲ್ಲಿ ಕೊಂಚ ವಿಳಂಬವಾಯಿತು. ಮಳೆಯ ನಡುವೆಯೂ ನೂರಾರು ಭಕ್ತರು ತೆಪ್ಪೋತ್ಸವದಲ್ಲಿ ಭಾಗಿಯಾದರು. ಮೊದಲಿಗೆ ಬೆಟ್ಟದ ದೇವಾಲಯದಲ್ಲಿರುವ ದೇವರಿಗೆ ನಮಿಸಿದ ಜನತೆ ನಂತರ ದೇವಾಲಯದ ಕೆಳ ಆವರಣದಲ್ಲಿರುವ ದೇವಿ ಕೆರೆ ಬಳಿಗೆ ತೆರಳಿ ತೆಪ್ಪೋತ್ಸವವನ್ನು ನೋಡಿ ಸಂಭ್ರಮಿಸಿದರಲ್ಲದೇ ಭಕ್ತಿ ಭಾವದಿಂದ ನಮಿಸಿದರು. ಹಲವರು ಅದ್ಭುತ ಕ್ಷಣಗಳನ್ನು ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆ ಹಿಡಿಯುತ್ತಿರುವುದು ಕಂಡು ಬಂತು.

ತೆಪ್ಪೋತ್ಸವವನ್ನು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೂ ಕೂಡ ಕಣ್ತುಂಬಿಸಿಕೊಂಡರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: