ದೇಶಪ್ರಮುಖ ಸುದ್ದಿ

ಉತ್ತರ ಪ್ರದೇಶದಲ್ಲಿ ಇಂದು 5ನೇ ಹಂತದ ಮತದಾನ

ಲಖನೌ: ಉತ್ತರ ಪ್ರದೇಶ ಚುನಾವಣೆಯ 5ನೇ ಹಂತದ ಮತದಾನ ಇಂದು (ಫೆ.27) ಆರಂಭವಾಗಿದೆ. ಈ ಹಂತದಲ್ಲಿ 51 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು ಮತದಾನದಲ್ಲಿ ಮತದಾರರು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಮೈತ್ರಿ ಇದ್ದರೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರತಿನಿಧಿಸುವ ಅಮೇಥಿ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಅಮೇಥಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅಮಿತಾ ಸಿಂಗ್ ಅವರು ಬೆಳಗ್ಗೆಯೇ ಮತ ಚಲಾಯಿಸಿದ್ದಾರೆ. ಅಮಿತಾ ಸಿಂಗ್ ವಿರುದ್ಧ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿರುವ ಗಾಯತ್ರಿ ಪ್ರಜಾಪತಿ ಅವರೂ ಸಹ ಮತದಾನ ಮಾಡಿದ್ದಾರೆ.

11 ಜಿಲ್ಲೆಗಳಲ್ಲಿ ನಡೆಯುತ್ತಿರುವ 5ನೇ ಹಂತದ ಚುನಾವಣೆಯಲ್ಲಿ 1.84 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ಫೈಜಾಬಾದ್, ಬಹರೈಚ್, ಬಸ್ತಿ, ಗೊಂದಾ, ಸಿದ್ಧಾರ್ಥನಗರ್, ಸಂತ್ ಕಬೀರ್ ನಗರ್, ಸುಲ್ತಾನ್ ಪುರ, ಶ್ರಾವಸ್ತಿ ಕ್ಷೇತ್ರಗಳಲ್ಲಿ ಜನರು ಮತದಾನ ಮಾಡಲು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ.

Leave a Reply

comments

Related Articles

error: