ನಮ್ಮೂರುಮೈಸೂರು

ಕಾವೇರಿ ವಿವಾದ: ಮಂಡ್ಯದಲ್ಲಿ 18 ದಿನಗಳ ಧರಣಿಗೆ ತಾತ್ಕಾಲಿಕ ವಿರಾಮ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಾಜಿ ಸಂಸದ ಜಿ. ಮಾದೇಗೌಡ ನೇತೃತ್ವದಲ್ಲಿ ಮಂಡ್ಯದಲ್ಲಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಳ್ಳಲಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿ. ಮಾದೇಗೌಡ ಅವರು, ರಾಜ್ಯ ಸರ್ಕಾರ ವಿಧಾನಮಂಡಲದ ಉಭಯ ಸದನಗಳಲ್ಲಿ ನಿಲುವಳಿ ಅಂಗೀಕರಿಸಿ ನೀರು ನಿಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದು, ಸುಪ್ರೀಂ ತೀರ್ಪು ವಿರೋಧಿಸಿ ನಡೆದ  ಪ್ರತಿಭಟನೆ ವೇಳೆ ಪೊಲೀಸರು ಬಂಧಿಸಿರುವ ರೈತರನ್ನು ಬಿಡುಗಡೆ ಮಾಡಬೇಕು ಮತ್ತು ರೈತರಿಗೆ ಎಕರೆಗೆ ಇಂತಿಷ್ಟು ಪರಿಹಾರ ಕೊಡಬೇಕೆಂಬ ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಕೃಷ್ಣರಾಜಸಾಗರ ಜಲಾಶಯದಿಂದ ನೀರು ಹರಿಸುವುದನ್ನು ನಿಲ್ಲಿಸಿರುವುದರಿಂದ ರೈತ ಹಿತರಕ್ಷಣಾ ಸಮಿತಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಂಡಿದೆ ಎಂದು ತಿಳಿಸಿದರು.

Leave a Reply

comments

Tags

Related Articles

error: