ಮೈಸೂರು

ಜೆಡಿಎಸ್ ನಿಂದ ಅಧ್ಯಕ್ಷ ಸ್ಥಾನಕ್ಕಾಗಿ ರಣತಂತ್ರ: ಕಾಂಗ್ರೆಸ್ ನಿಂದ ಪ್ರತಿಭಟನೆ : ಪೊಲೀಸರ ಮಧ್ಯಪ್ರವೇಶ

ಎ ಪಿ ಎಂ ಸಿ ಚುನಾವಣಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ ಸ್ಥಾನದ ಗದ್ದುಗೆ ಏರಲು‌ ಜೆಡಿಎಸ್ ತಂತ್ರ ರೂಪಿಸಿದೆ. ಕಾಂಗ್ರೆಸ್ ಸದಸ್ಯರನ್ನು ತನ್ನತ್ತ ಸೆಳೆಯಲು ಕಾರ್ಯತಂತ್ರ ನಡೆಸಿದೆ ಎಂದು ಆರೋಪಿಸಿ ಕೆ.ಆರ್.ನಗರದ ಕಾಂಗ್ರೆಸ್ ಮುಖಂಡ ಕೃಷ್ಣೇಗೌಡ ನೇತೃತ್ವದಲ್ಲಿ ಎಪಿಎಂಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಮೈಸೂರು ಜಿಲ್ಲೆ ಕೆ.ಆರ್.ನಗರ ಪಟ್ಟಣದ ಎಪಿಎಂಸಿ ಅಧ್ಯಕ್ಷ‌- ಉಪಾಧ್ಯಕ್ಷ ಚುನಾವಣೆಗೆ ಒಟ್ಟು 16 ಸ್ಥಾನಗಳ ಪೈಕಿ ಕಾಂಗ್ರೆಸ್ 9, ಜೆಡಿಎಸ್ 7 ಸ್ಥಾನವಿದೆ. ಆದರೆ ಜೆಡಿಎಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ‌ ಚಂದ್ರಶೇಖರ್ ಗೌಡ ಅವರು ಕಾಂಗ್ರೆಸ್ ಸದಸ್ಯರಿಗೆ ಹಣ ನೀಡುವ ಆಮಿಷವೊಡ್ಡಿ, ತಮ್ಮ ಅಧ್ಯಕ್ಷ ಸ್ಥಾನ ಗಟ್ಟಿಪಡಿಸಿಕೊಳ್ಳಲು ಕಾರ್ಯತಂತ್ರ‌ ರೂಪಿಸಲಾಗಿದೆ. ಚುನಾವಣೆ ನಡೆಯುತ್ತಿರುವ ಈ‌ ಸಂದರ್ಭದಲ್ಲಿ ನೇರವಾಗಿ ಆ ಸ್ಥಳಕ್ಕೆ ತೆರಳಿ ಚಂದ್ರಶೇಖರ್ ಅವರು 5 ಲಕ್ಷದ ಚೆಕ್‌ ನೀಡಿ ಹೊರ ಬಂದಿದ್ದಾರೆ ಎಂದು ಕಾಂಗ್ರೆಸ್ ನ ಕೃಷ್ಣೇಗೌಡ ಆರೋಪಿಸಿದ್ದಾರೆ.  ಜೆಡಿಎಸ್ ಅಭ್ಯರ್ಥಿಯ ಈ ನಡೆಗೆ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸದಸ್ಯರು  ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ಅಲ್ಲದೆ, ಚುನಾವಣೆ ಮುಂದೂಡುವಂತೆ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣೇಗೌಡ ನೇತೃತ್ವದಲ್ಲಿ ಕೆ.ಆರ್.ನಗರದ ‌ಎಪಿಎಂಸಿ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೂ ಮೂವರು ಸದಸ್ಯರ ಖರೀದಿಗೆ ಯತ್ನಿಸಿದ್ದು, ಎಪಿಎಂಸಿ ಆವರಣ ರಣಾಂಗಣವಾಗುತ್ತಿದೆ. ಈ ‌ಮಧ್ಯೆ ಪೊಲೀಸರು ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Leave a Reply

comments

Related Articles

error: