ಮೈಸೂರು

ಮುಕ್ತ ವ್ಯಾಪಾರ ಒಪ್ಪಂದದ ವಿರುದ್ಧ ಅ.24 ರಂದು ದೇಶದಾದ್ಯಂತ ಪ್ರತಿಭಟನೆ

ಮೈಸೂರು,ಅ.19-ಮುಕ್ತ ವ್ಯಾಪಾರ ಒಪ್ಪಂದದ ವಿರುದ್ಧ ಅ.24 ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ದೇಶದಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪ್ರದಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಹೇಳಿದರು.

ಜಲದರ್ಶಿನಿ ಅತಿಥಿ ಗೃಹದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೊಸಕೋಟೆ ಬಸವರಾಜು, 15 ರಾಷ್ಟ್ರಗಳು ಈ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲು ಮುಂದಾಗಿವೆ. ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್ ಅಇಇಪಿ) ಒಪ್ಪಂದಕ್ಕೆ ಕೇಂದ್ರ ಸರ್ಕಾದ ಸಹಿ ಹಾಕಿದ್ದಲ್ಲಿ ಹೈನುಗಾರಿಕೆ ಮಾಡುವ 15 ಕೋಟಿ ಮಂದಿಗೆ ತೊಂದರೆಯಾಗುತ್ತಿದೆ. ಹೊರ ದೇಶಗಳಿಂದ ಹಾಲು ಹಾಗೂ ಹಾಲಿನ ಉತ್ಪನ್ನಗಳು ಲಂಗುಲಾಗಮಿಲ್ಲದೆ ಹರಿದುಬರುತ್ತವೆ. ಈ ಒಪ್ಪಂದ ರೈತರಿಗೆ ಕಂಟಕವಾಗಲಿದೆ ಎಂದು ಆರೋಪಿಸಿದರು.

ಹೊರ ದೇಶದವರು ಇದರಿಂದ ತೆರಿಗೆ ಮುಕ್ತವಾಗಿ ವ್ಯಾಪರ ನಡೆಸಲಿವೆ. ಇದರಿಂದ ಭಾರತದಲ್ಲಿ ಉತ್ಪತ್ತಿಯಾಗುವ ಉತ್ಪನ್ನಗಳಿಗೆ ಬೆಲೆ ಇಲ್ಲದಂತಾಗಿದೆ. ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಈ ಒಪ್ಪಂದಕ್ಕೆ ಸಹಿ ಹಾಕಬಾರದು. ಹೀಗಾಗಿ ಎಲ್ಲ ಸಂಘಟನೆಗಳು ಒಟ್ಟುಗೂಡಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಎಲ್ಲಾ ಜಿಲ್ಲಾಕೇಂದ್ರಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಮೋದಿ ಅಧಿಕಾರಕ್ಕೆ ಬಂದ ನಂತರ ನಮ್ಮ ರೈತರ ಹಿತ ಕಾಪಾಡುತ್ತಾರೆ. ನಮ್ಮ ರೈತರು ಬೆಳೆದ ಉತ್ಪನ್ನಗಳನ್ನ ಹೊರ ದೇಶಕ್ಕೆ ಕಳುಹಿಸಿ ಆರ್ಥಿಕವಾಗಿ ರೈತರು ಸಬಲರಾಗುತ್ತಾರೆ ಎಂಬ ಆಶಾಭಾವನೆ ಇತ್ತು. ಆದರೆ ಇಂದು ರೈತರನ್ನು ಬೀದಿಗೆ ತರುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ರೈತ ಮುಖಂಡರು ಹೇಳಿಕೆ ನೀಡಿದ್ದಾರೆ. (ಕೆ.ಎಸ್, ಎಂ.ಎನ್)

Leave a Reply

comments

Related Articles

error: