ಸುದ್ದಿ ಸಂಕ್ಷಿಪ್ತ

ಅತ್ಯುತ್ತಮ ಯುವ ಸಂಘ ಪ್ರಶಸ್ತಿಗೆ ಕನಕ ಯುವಕ ಸಂಘ ಆಯ್ಕೆ

ಭಾರತ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಮೈಸೂರು ಜಿಲ್ಲಾ ನೆಹರು ಯುವ ಕೇಂದ್ರ ನೀಡುವ ಅತ್ಯುತ್ತಮ ಯುವ ಸಂಘ ಪ್ರಶಸ್ತಿಗೆ ಹುಣಸೂರು ತಾಲೂಕಿನ ಮಾರಗೌಡನಹಳ್ಳಿಯ ಕನಕ ಯುವಕ ಸಂಘ ಆಯ್ಕೆಯಾಗಿದೆ.

ಜಿಲ್ಲಾಧಿಕಾರಿ ಡಿ.ರಂದೀಪ್ ಅಧ್ಯಕ್ಷತೆಯ ಜಿಲ್ಲಾ ಆಯ್ಕೆ ಸಮಿತಿಯಲ್ಲಿ ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕ ಡಾ.ಎಂ.ರುದ್ರಯ್ಯ ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿ ಪ್ರೊ.ಚಿಕ್ಕಕೆಂಪೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರತಿನಿಧಿ ಗೀತಾಂಜಲಿ, ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಂ.ಎನ್.ನಟರಾಜ್ ರನ್ನೊಳಗೊಂಡ ಸಮಿತಿಯು ಆಯ್ಕೆ ನಡೆಸಿದೆ. ಪ್ರಶಸ್ತಿಯು 25ಸಾವಿರ ರೂ. ನಗದು ಹಾಗೂ ಪ್ರಮಾಣಪತ್ರವನ್ನು ಒಳಗೊಂಡಿದೆ.

Leave a Reply

comments

Related Articles

Check Also

Close
error: