ಕರ್ನಾಟಕ

ಬಿಲ್ಲವ ಸಮಾಜ ಸೇವಾ ಸಂಘದ ಸಮ್ಮೇಳನ: ವಿದ್ಯಾರ್ಥಿಗಳಿಗೆ ನೆರವು

ಮಡಿಕೇರಿ,ಅ.21-ಬ್ರಹ್ಮಶ್ರೀ ನಾರಾಯಣಗುರುಗಳ ದಿವ್ಯ ಸಂದೇಶದಿಂದಾಗಿ ಸಮಾಜದಲ್ಲಿ ಅನೇಕ ಬದಲಾವಣೆಗಳಾಗಿವೆ. `ಶಿಕ್ಷಣದಲ್ಲಿ ಸ್ವತಂತ್ರ್ಯರಾಗಿ, ಸಂಘಟನೆಯಿಂದ ಬಲಿಷ್ಠರಾಗಿ’ ಎನ್ನುವ ಅವರ ಸಂದೇಶವನ್ನು ಎಲ್ಲರು ಪಾಲಿಸುವಂತಾಗಬೇಕು ಎಂದು ಮಂಗಳೂರಿನ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಕರೆ ನೀಡಿದ್ದಾರೆ.

ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಮಡಿಕೇರಿಯ ಬಿಲ್ಲವ ಸಮಾಜ ಸೇವಾ ಸಂಘದ ಸಮ್ಮೇಳನ ಹಾಗೂ ನಾರಾಯಣ ಗುರು ಜಯಂತೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದ ಉನ್ನತಿಗೆ ಶಿಕ್ಷಣ ಅತ್ಯವಶ್ಯಕವಾಗಿದ್ದು, ಮಕ್ಕಳ ವಿದ್ಯಾಭ್ಯಾಸದ ಭದ್ರ ಅಡಿಪಾಯಕ್ಕೆ ಸಂಘಟನೆ ನೆರವಾಗಬೇಕು ಎಂದು ಹೇಳಿದರು.

150 ವರ್ಷಗಳ ಹಿಂದೆ ಜಾತಿ ಪದ್ಧತಿಯಿಂದಾಗಿ ಬಿಲ್ಲವ ಸಮಾಜದ ಜನರು ಶೋಷಣೆಗೆ ಒಳಗಾಗಿದ್ದರು. ನಾರಾಯಣ ಗುರುಗಳು ಸಮಾಜದಲ್ಲಿ ಹೊಸ ಸಂಚಲನವನ್ನು ಉಂಟು ಮಾಡಿದ್ದಾರೆ. ಅವರ ಆದರ್ಶ ಗುಣಗಳನ್ನು, ತತ್ವ ಸಿದ್ಧಾಂತಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ. ರಾಜ್ಯದ ಹಲವೆಡೆ ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಂತಹ ಮಕ್ಕಳನ್ನು ಸಂಘ ಸಂಸ್ಥೆಗಳು ಗುರುತಿಸಿ ಅವರ ಶಿಕ್ಷಣಕ್ಕೆ ನೆರವಾಗಬೇಕು ಎಂದು ಹೇಳಿದರು.

ಇದೇ ಸಂದರ್ಭ ಮಡಿಕೇರಿ ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ಅಖಿಲ ಭಾರತ ಬಿಲ್ಲವರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ಚೆಕ್ ವಿತರಿಸಲಾಯಿತು ಮತ್ತು ವಿದ್ಯಾರ್ಥಿವೇತನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರಿನ ಬಿಲ್ಲವರ ಮಹಿಳಾ ಯೂನಿಯನ್ ಅಧ್ಯಕ್ಷೆ ಎನ್.ಸುಮಲತಾ ಸುವರ್ಣ, ಮಡಿಕೇರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷೆ ಬಿ.ಎಸ್.ಲೀಲಾವತಿ, ಕುಶಾಲನಗರ ಸುವರ್ಣ ಕಾಫಿ ವಕ್ರ್ಸ್‍ನ ಉದ್ಯಮಿ ಬಿ.ಎನ್.ರಮೇಶ್, ತಾ.ಪಂ ಸದಸ್ಯ ಅಪ್ರು ರವೀಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಪದ್ಮ ಇತರರು ಉಪಸ್ಥಿತರಿದ್ದರು. (ಕೆಸಿಐ, ಎಂ.ಎನ್)

Leave a Reply

comments

Related Articles

error: