ಕರ್ನಾಟಕಪ್ರಮುಖ ಸುದ್ದಿ

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಚಿವೆ ಉಮಾಶ್ರೀ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬಾಗಲಕೋಟೆ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಅವರು ಪ್ರತಿಭಟನೆಯೊಂದರಲ್ಲಿ ಭಾಗಿಯಾಗಿದ್ದ  ಸಂದರ್ಭ ಅಸ್ವಸ್ಥರಾದ ಘಟನೆ ಬಾಗಲಕೋಟೆಯಿಂದ ವರದಿಯಾಗಿದೆ.

ಜನಸಾಮಾನ್ಯರಿಗೆ ತೊಂದರೆ ಉಂಟು ಮಾಡಿರುವ ಕೇಂದ್ರದ ಮೋದಿ ಸರ್ಕಾರದ ನೋಟು ಅಮಾನ್ಯೀಕರಣ ನಿರ್ಧಾರ ಖಂಡಿಸಿ ಬಾಗಲಕೋಟೆಯ ಹುನಗುಂದದಲ್ಲಿ ಕಾಂಗ್ರೆಸ್ ಪ್ರತಿಭಟನಾ ಧರಣಿ ನಡೆಸುತ್ತಿತ್ತು. ಧರಣಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಚಿವೆ ಉಮಾಶ್ರೀ ಅವರು ವೇದಿಕೆಗೆ ಬಂದಾಗ ಅಸ್ವಸ್ಥರಾದರು. ತಕ್ಷಣ ಸಚಿವರನ್ನು ಹುನಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಿ ಚಿಕಿತ್ಸೆ ನೀಡಲಾಯಿತು.

ವೈದ್ಯಾಧಿಕಾರಿ ಕುಸುಮಾ ಅವರು ಚಿಕಿತ್ಸೆ ನೀಡಿದರು. ಉಮಾಶ್ರೀ ಅವರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯೆ ಕುಸುಮಾ, ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Leave a Reply

comments

Related Articles

error: