ದೇಶಪ್ರಮುಖ ಸುದ್ದಿ

ಮಹಾರಾಷ್ಟ್ರದಲ್ಲಿ ಶೇ.14.54, ಹರಿಯಾಣದಲ್ಲಿ ಶೇ.22.25 ಮತದಾನ

ನವದೆಹಲಿ,ಅ.21-ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯಗಳ ಒಟ್ಟು 378 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

ಮಹಾರಾಷ್ಟ್ರದ 288 ಮತ್ತು ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ, ಇದರ ಜತೆಯಲ್ಲೇ 17 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ಒಟ್ಟು 51 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೂ ಮತದಾನ ನಡೆಯುತ್ತಿದೆ.

ಬೆಳಿಗ್ಗೆ 11 ಗಂಟೆ ಹೊತ್ತಿಗೆ ಹರಿಯಾಣದಲ್ಲಿ ಶೇ.22.25, ಮಹಾರಾಷ್ಟ್ರದಲ್ಲಿ ಶೇ.14.54 ಮತದಾನವಾಗಿದೆ. ಗುರುವಾರ (ಅ.24) ಫಲಿತಾಂಶ ಪ್ರಕಟವಾಗಲಿದೆ.

ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ತೆರವಾಗಿರುವ 2 ಲೋಕಸಭಾ ಕ್ಷೇತ್ರಗಳ ಉಪಚುನಾವಣೆಗೂ ಮತದಾನ ನಡೆಯಲಿದ್ದು, ಎಲ್ಲೆಡೆ ಬಿಗಿಭದ್ರತೆ ಕಲ್ಪಿಸಲಾಗಿದೆ. (ಎಂ.ಎನ್)

 

Leave a Reply

comments

Related Articles

error: