ಮೈಸೂರು

ರಸ್ತೆ ಅಪಘಾತ: ಬೈಕ್ ಸವಾರ ಸಾವು; ಇಬ್ಬರಿಗೆ ಗಾಯ

ತಿ.ನರಸೀಪುರ,ಅ.21-ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ತಿ.ನರಸೀಪುರ ತಾಲೂಕಿನ ತಲಕಾಡು-ಮುಡುಕುತೊರೆ ರಸ್ತೆಯಲ್ಲಿ ನಡೆದಿದೆ.

ರೇಚಣ್ಣ (23) ಮೃತಪಟ್ಟವರು. ಮಣಿ (23) ಮತ್ತು ವಿಜಯ್ ಕುಮಾರ್ (22) ಗಾಯಗೊಂಡಿದ್ದಾರೆ. ಇವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಹೊಸ ಹೆಮ್ಮಿಗೆ ಗ್ರಾಮದ ನಿವಾಸಿಗಳು ಎಂದು ಹೇಳಲಾಗುತ್ತಿದೆ.

ಮೂವರು ಯುವಕರು ಬಣ್ಣ ಹೊಡೆಯುವ ಕೆಲಸಕ್ಕಾಗಿ ಕೊಡಗನಹಳ್ಳಿ ಗ್ರಾಮಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಬೈಕ್‌ನಲ್ಲಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಈ ಕುರಿತು ತಲಕಾಡು ಉಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. (ಎಂ.ಎನ್)

 

Leave a Reply

comments

Related Articles

error: