ದೇಶಪ್ರಮುಖ ಸುದ್ದಿ

ವಿಶ್ವಾಸಮತ ಯಾಚನೆ ವೇಳೆ ಕೋಲಾಹಲ : ಪಳನಿ ಸ್ವಾಮಿಗೆ ಹೈಕೋರ್ಟ್ ನೋಟಿಸ್

ಚೆನ್ನೈ: ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವಾಗ ಉಂಟಾದ ಗದ್ದಲದ ಸಂಬಂಧ ಮದ್ರಾಸ್ ಹೈಕೋರ್ಟ್ ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿಧನದ ಬಳಿಕ ತಮಿಳುನಾಡು ರಾಜಕೀಯದಲ್ಲಿ ಬಿಕ್ಕಟ್ಟು ಎದುರಾಗಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಅವರು ಜೈಲು ಪಾಲಾದ ನಂತರ ಈ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿತ್ತು. ಈ ಹಿನ್ನಲೆಯಲ್ಲಿ ಹೆಚ್ಚು ಶಾಸಕರ ಬಲ ಸಹಿ ತೋರಿದ್ದ ಪಳನಿಸ್ವಾಮಿಯವರನ್ನು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ತಮಿಳುನಾಡು ರಾಜ್ಯದ ಮುಖ್ಯಮಂತ್ರಿಯಾಗಿ ನೇಮಕ ಮಾಡಿದ್ದರು.

ವಿಶ್ವಸಮತಯಾಚನೆ ವೇಳೆ ರಹಸ್ಯ ಮತದಾನಕ್ಕೆ ಸ್ಪೀಕರ್ ಒಪ್ಪಿಲ್ಲ. ಅಸಂವಿಧಾನಿಕ ರೀತಿಯಲ್ಲಿ ವಿಶ್ವಾಸಮತ ಸಾಬೀತು ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಸಾಕಷ್ಟು ಟೀಕೆ ವ್ಯಕ್ತಪಡಿಸತೊಡಿದ್ದವು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ, ವಿಧಾನಸಭಾ ಸ್ಪೀಕರ್, ವಿಧಾನಸಭೆ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಮಾರ್ಚ್ 10 ರೊಳಗಾಗಿ ಪ್ರಮಾಣಪತ್ರ ಸಲ್ಲಿಸುವಂತೆ ಇವರಿಗೆ ಕೋರ್ಟ್ ಸೂಚನೆ ನೀಡಿದೆ.

 

Leave a Reply

comments

Related Articles

error: