ಕರ್ನಾಟಕ

ಚಿಕ್ಕಮಗಳೂರು: ಮಳೆಯ ಆರ್ಭಟಕ್ಕೆ ಭತ್ತದ ಬೆಳೆ ನಾಶ

ಚಿಕ್ಕಮಗಳೂರು,ಅ.23-ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆ ಅಕ್ಷರಶಃ ನಲುಗಿ ಹೋಗಿದೆ. ಮಳೆಯಿಂದಾಗಿ ಭತ್ತದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ.

ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯ ಆರ್ಭಟಕ್ಕೆ ಉಜ್ಜಿನಿ- ಬಿದರೆ ಗ್ರಾಮದಲ್ಲಿನ ಭತ್ತದ ಗದ್ದೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಇದರಿಂದ ಭತ್ತದ ಬೆಳೆ ನಾಶವಾಗಿ ಬೆಳೆದ ಫಸಲು ಕೈಗೆ ಬಾರದೆ ರೈತರಿಗೆ ದಿಕ್ಕೆತೋಚದಂತಾಗಿದ್ದಾರೆ. (ಎಂ.ಎನ್)

Leave a Reply

comments

Related Articles

error: