ಮೈಸೂರು

ಮಳೆಯಿಂದ ಮನೆ ಗೋಡೆ ಕುಸಿತ

ಮೈಸೂರು,ಅ.23:- ಮೈಸೂಇನಲ್ಲಿ ಕಳೆದೆರಡ ದಿನಗಳಿಂದ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಸುಣ್ಣದ ಕೇರಿಯಲ್ಲಿರುವ ಹಳೆಯ ಮನೆಯ ಗೋಡೆ ಕುಸಿದ ಘಟನೆ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಿನ್ನೆ ಬೆಳಿಗ್ಗೆ 4.30ರ ಸುಮಾರಿಗೆ ಮನೆಯ ಗೋಡೆ ಕುಸಿದು ಬಿದ್ದಿದ್ದು, ಯಾರೂ ಮನೆಯಲ್ಲಿ ವಾಸಿಸುತ್ತಿರಲಿಲ್ಲವಾದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಮನೆಯು ಶಿವಪ್ರಸಾದ್ ಎಂಬವರಿಗೆ ಸೇರಿದ್ದಾಗಿದ್ದು, ತುಂಬಾ ಶಿಥಿಲಾವಸ್ಥೆಯಲ್ಲಿತ್ತು. ಆದ ಕಾರಣ ಆ ಮನೆಯಲ್ಲಿ ಯಾರೂ ವಾಸ್ತವ್ಯವಿರಲಿಲ್ಲ. ಮಾಹಿತಿ ತಿಳಿದ ತಕ್ಷಣ ಮಹಾನಗರ ಪಾಲಿಕೆಯ ವಲು ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಕೆ.ಆರ್.ಠಾಣೆಯ ಪೊಲೀಸರು ಕೂಡ ಆಗಮಿಸಿ ಪರಿಶೀಲನೆ ನಡೆಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: