ಪ್ರಮುಖ ಸುದ್ದಿ

ಐಎನ್‌ಎಕ್ಸ್ ಮೀಡಿಯಾ ಪ್ರಕರಣ : ಜಾಮೀನು ಕೋರಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ

ದೇಶ(ನವದೆಹಲಿ) ಅ.23:-  ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದು,  ಬುಧವಾರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಪಿ.ಚಿದಂಬರಂ ದೆಹಲಿ ಹೈಕೋರ್ಟ್‌ನಲ್ಲಿ ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಮಂಗಳವಾರವಷ್ಟೇ ಸಿಬಿಐ ದಾಖಲಿಸಿದ ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ, ಇಡಿ ಕಸ್ಟಡಿಯಿಂದ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ತನಿಖೆ ನಡೆಸಿದ ಸಿಬಿಐ ಕಳೆದ ನಾಲ್ಕು ದಿನಗಳ ಹಿಂದಷ್ಟೇ ಚಿದಂಬರಂ ಮತ್ತು 13 ಮಂದಿ ವಿರುದ್ಧ ಪ್ರಕರಣ ದಾಖಲಿಸಿತ್ತು.  ಹಣ ವರ್ಗಾವಣೆ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಆಗಸ್ಟ್ 21 ರಂದು ಚಿದಂಬರಂ ಅವರನ್ನು ಬಂಧಿಸಿತ್ತು. (ಎಸ್.ಎಚ್)

Leave a Reply

comments

Related Articles

error: