ಕರ್ನಾಟಕಪ್ರಮುಖ ಸುದ್ದಿ

ಡಿ.ಕೆ.ಶಿವಕುಮಾರ್ ಗೆ ಜಾಮೀನು: ನ್ಯಾಯ ಸಿಕ್ಕಿದೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ  

ಬಾದಾಮಿ,ಅ.23-ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರಾಗಿರುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಬಾದಾಮಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ಕೋರ್ಟ್‌ನಲ್ಲಿಯೇ ಅವರಿಗೆ ಜಾಮೀನು ಸಿಗಬೇಕಿತ್ತು. ಆದರೆ ಹೈಕೋರ್ಟ್‌ನಲ್ಲಿ ಜಾಮೀನು ಸಿಕ್ಕಿದೆ. ನ್ಯಾಯ ಸಿಕ್ಕಿದೆ ಎಂಬುದು ಸಂತೋಷ ತಂದಿದೆ ಎಂದರು.

ತಪ್ಪಿತಸ್ಥ ಎಂಬುದು ಸಾಬೀತಾದರೆ ಜೈಲಿಗೆ ಕಳುಹಿಸಲಿ. ತನಿಖೆ ಹಂತದಲ್ಲಿಯೇ ಜೈಲಿಗೆ ಕಳಿಸುವುದು ಸರಿಯಲ್ಲ. ಇದು ದ್ವೇಷದ ರಾಜಕಾರಣ ಎಂದು ಹೇಳಿದರು. (ಎಂ.ಎನ್)

Leave a Reply

comments

Related Articles

error: