ಮೈಸೂರು

ಚುನಾವಣಾ ಪ್ರಕ್ರಿಯೆ ಮಾ.1ಕ್ಕೆ

ಕೆ.ಆರ್. ನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಚುನಾವಣಾ ಪ್ರಕ್ರಿಯೆಯನ್ನು ಮಾರ್ಚ್ 1ಕ್ಕೆ ಮುಂದೂಡಲಾಗಿದೆ.

ಕಾಂಗ್ರೆಸ್, ಜೆಡಿಎಸ್ ಸದಸ್ಯರ ನಡುವೆ ತೀವ್ರ ಜಟಾಪಟಿ ನಡೆದ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಗಳು ಬುಧವಾರಕ್ಕೆ ಅಂದರೆ ಮಾರ್ಚ್ ಒಂದಕ್ಕೆ ಮುಂದೂಡಿದ್ದಾರೆ.
ಕೆ.ಆರ್. ನಗರ ತಾಲ್ಲೂಕು ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಜಿ.ಎಚ್. ನಾಗರಾಜು ಚುನಾವಣೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಸುಸೂತ್ರವಾಗಿ ಚುನಾವಣೆ ನಡೆಸಲು ಪೊಲೀಸರು ಅಗತ್ಯವಾಗಿದ್ದು, ಸ್ಥಳದಲ್ಲಿ  ಬಂದೋಬಸ್ತ್ ನೀಡಲು ವಿಫಲರಾಗಿದ್ದಾರೆ ಎಂಬ ಕಾರಣ ನೀಡಿ ಮಾರ್ಚ್ 1ಕ್ಕೆ ಚುನಾವಣಾ ಪ್ರಕ್ರಿಯೆಯನ್ನು ಮುಂದೂಡಿದ್ದಾರೆ ಎನ್ನಲಾಗಿದೆ.

Leave a Reply

comments

Related Articles

error: