ಪ್ರಮುಖ ಸುದ್ದಿ

ಮಳೆಹಾನಿ ಸಂತ್ರಸ್ತರಿಗೆ ನಾಳೆ ಮನೆಗಳ ಹಸ್ತಾಂತರ : ನಾಳೆ ಕೊಡಗಿಗೆ ಸಚಿವರಾದ ಈಶ್ವರಪ್ಪ-ಸೋಮಣ್ಣ

ರಾಜ್ಯ(ಮಡಿಕೇರಿ) ಅ.24 :- ಕಳೆದ ವರ್ಷ ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾದ ಸಂತ್ರಸ್ತರಿಗೆ ಅ.25 ರಂದು ನೂತನ ಮನೆಗಳ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.

ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ಮಡಿಕೇರಿಗೆ ಭೇಟಿ ನೀಡಲಿದ್ದಾರೆ. ಎರಡು ವರ್ಷಗಳ ಮಳೆಹಾನಿ ಪರಿಹಾರ ಕಾರ್ಯಗಳ ಪರಿಶೀಲನೆ, ಸಂತ್ರಸ್ತರಿಗೆ ಮನೆಗಳ ಹಸ್ತಾಂತರ ಹಾಗೂ ನೂತನ ಜಿ.ಪಂ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ. ಆರಂಭಿಕ ಹಂತದಲ್ಲಿ ಸಂತ್ರಸ್ತರಿಗೆ 35 ಮನೆಗಳನ್ನು ನೀಡಲಾಗುತ್ತಿದೆ.

  ಕೆ.ಎಸ್.ಈಶ್ವರಪ್ಪ ಭೇಟಿ  

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಅ.25 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: