ದೇಶ

ಪೂಂಚ್ ನಲ್ಲಿ ಸೇನಾ ಹೆಲಿಕಾಪ್ಟರ್ ಅಪಘಾತ

ಶ್ರೀನಗರ,ಅ.24-ಸೇನಾ ಹೆಲಿಕಾಪ್ಟರ್ ವೊಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿದೆ.

ಅಪಘಾತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ಸೇನೆಯ ಉತ್ತರ ವಿಭಾಗದ ಕಮಾಂಡರ್ ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಇಬ್ಬರು ಪೈಲಟ್ಗಳು ಸೇರಿದಂತೆ ಏಳು ಮಂದಿ ಇದ್ದರೆಂದು ತಿಳಿದುಬಂದಿದೆ.

ತಾಂತ್ರಿಕ ದೋಷಗಳಿಂದ ಅವಗಢ ಸಂಭವಿಸಿದೆ ಎಂದು ನಂಬಲಾಗಿದ್ದು, ಹೆಲಿಕಾಪ್ಟರ್ ಪೂಂಚ್ ಜಿಲ್ಲೆಯ ಬೇಡರ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. (ಎಂ.ಎನ್)

Leave a Reply

comments

Related Articles

error: