ಮೈಸೂರು

ಕಲಿತ ಪಾಠದ ಪ್ರಾಯೋಗಿಕ ಮಾದರಿಗಳನ್ನು ಮಾಡಿ ತಿಳಿಸುವ ಮೂಲಕ ಜ್ಞಾನವನ್ನು ಇನ್ನಷ್ಟು ವೃದ್ಧಿಸಿಕೊಳ್ಳಲು ಸಾಧ್ಯ : ಎಸ್.ರಾಮಪ್ರಸಾದ್‍

ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ

ಮೈಸೂರು, ಅ.25:- ನಗರದ ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನರ್ಸರಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳು ವಿಜ್ಞಾನ ವಸ್ತುಪ್ರದರ್ಶನವನ್ನು ಹಮ್ಮಿಕೊಂಡಿದ್ದರು.

ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ್ದ, ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಅಧ್ಯಯನ ಸಂಸ್ಥೆಯ ಕನ್ನಡ ವಿಶ್ವಕೋಶ ನಿವೃತ್ತ ವಿಜ್ಞಾನ ಸಂಪಾದಕ ಎಸ್.ರಾಮಪ್ರಸಾದ್‍ ಉದ್ಘಾಟಿಸಿ   ವಿದ್ಯಾರ್ಥಿಗಳು ತಯಾರಿಸಿದ ಮಾದರಿಗಳನ್ನು ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳು ಪಾಠದ ಮೂಲಕ ತರಗತಿಯಲ್ಲಿ ಕಲಿತ ಹಲವಾರು ವಿಷಯಗಳ ಮಾದರಿಗಳನ್ನು ತಯಾರಿಸಿದ್ದಾರೆ. ತಾವು ಕಲಿತ ಪಾಠದ ಪ್ರಾಯೋಗಿಕ ಮಾದರಿಗಳನ್ನು ಮಾಡಿ ತಿಳಿಸುವ ಮೂಲಕ ತಾವು ಕ್ರಿಯಾಶೀಲರಾಗಲು ಹಾಗೂ ತಮ್ಮ ಜ್ಞಾನವನ್ನು ಇನ್ನಷ್ಟು ವೃದ್ಧಿಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿದೆ ಎಂದರು.

ತಾವಿಲ್ಲಿ ಪ್ರದರ್ಶನಕ್ಕಿಟ್ಟಿರುವ ನೀರಿನ ಮರು ಬಳಕೆಯ ವಿಧಾನಗಳು, ಮಳೆ ನೀರು ಕೊಯ್ಲು, ಸಾವಯವ ಕೃಷಿ ಪದ್ಧತಿ, ಸಂಗಮ ರಸ್ತೆ ಸಾರಿಗೆಯ ರೂಪುರೇಷೆಗಳು, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ, ಶಕ್ತಿಯ ಮೂಲ ಮತ್ತು ಸಂರಕ್ಷಣೆ ಹೀಗೆ ಎಲ್ಲ ಮಾದರಿಗಳನ್ನು ಅಚ್ಚುಕಟ್ಟಾಗಿ ತಯಾರಿಸಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಟಿ.ರಂಗಪ್ಪ ಮಾತನಾಡಿ, ಇಂದಿನ ದಿನಗಳಲ್ಲಿ ಇಂತಹ ವಸ್ತುಪ್ರದರ್ಶನಗಳು ಅತ್ಯವಶ್ಯಕವಾಗಿದ್ದು, ಇದರಿಂದ ಪ್ರತಿಭೆಗಳು ಬೆಳಕಿಗೆ ಬಂದು ಸರ್ವತೋಮುಖ ಅಬಿವೃದ್ಧಿಗೆ ಕಾರಣವಾಗುತ್ತದೆ. ವಿಜ್ಞಾನವನ್ನು ಅಲ್ಲಗೆಳೆಯುವಂತಿಲ್ಲ. ವಸ್ತುಪ್ರದರ್ಶನ ಮಾಡಿದಾಗ ಭಯ, ಕೀಳರಿಮೆ ದೂರವಾಗಿ ಮನರಂಜನಾ ಅನುಭವವಾಗುತ್ತದೆ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಸಂಸ್ಥೆ ಆಡಳಿತಾಧಿಕಾರಿ ಕಾಂತಿ ನಾಯಕ್‍ ಮಾತನಾಡಿ, ನಮ್ಮ ನಿರೀಕ್ಷೆಗೂ ಮೀರಿ ವಿದ್ಯಾರ್ಥಿಗಳು ಈ ವಿಜ್ಞಾನ ವಸ್ತುಪ್ರದರ್ಶನದ ಮಾದರಿಗಳನ್ನು ತಯಾರಿಸಿ ಯಶಸ್ವಿಗೊಳಿಸಿದ್ದಾರೆ. ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂಬ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಈ ವಸ್ತುಪ್ರದರ್ಶನವನ್ನು ರಾಜ್ಯಮಟ್ಟದಲ್ಲಿ ಆಯೋಜಿಸಲಾಗುವುದು ಎಂದು  ತಿಳಿಸಿದರು.

ವೇದಿಕೆಯಲ್ಲಿ ಗಂಗೋತ್ರಿ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯಿನಿ ಝರೀನಾ ಬಾಬುಲ್, ಆಶಾ, ಸುಪ್ರಭಾ, ಸುಭದ್ರ, ಸುನಿತಾ ಹಾಗೂ ಚೈತ್ರ ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: