ಕರ್ನಾಟಕ

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಮೃತದೇಹ ಪತ್ತೆ

ಮಂಗಳೂರು,ಅ.26-ಅಪಾರ್ಟ್‌ಮೆಂಟ್‌ ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ.

ಕೇರಳದ ಎರ್ನಾಕುಲಂ ಮೂಲದ ಅನುಪಮಾ (23) ಮೃತ ವಿದ್ಯಾರ್ಥಿನಿ. ಅತ್ತಾವರದ ಅಪಾರ್ಟ್‌ಮೆಂಟ್‌ ವೊಂದರ ಎರಡನೇ ಮಹಡಿಯ ರೂಂ ಒಂದರಲ್ಲಿ ಅನುಪಮಾ ಮೃತದೇಹ ಪತ್ತೆಯಾಗಿದೆ.

ನಿನ್ನೆ ರಾತ್ರಿ ಸುಮಾರು 11ರ ವೇಳೆಗೆ ವಿದ್ಯಾರ್ಥಿನಿ ವಾಸವಿರುವ ರೂಂ ಬಾಗಿಲನ್ನು ತೆರೆದು ನೋಡಿದಾಗ ವಿದ್ಯಾರ್ಥಿನಿ ಮೃತದೇಹ ಪ್ಯಾನಿಗೆ ನೇಣುಹಾಕಿದ ಸ್ಥಿತಿಯಲ್ಲಿ ಕಂಡುಬಂದಿದೆ.

ಅನುಪಮಾ ಕಳೆದ ಒಂದು ವರ್ಷದಿಂದ ಈ ಅಪಾರ್ಟ್‌ಮೆಂಟ್‌ ನಲ್ಲಿ ವಾಸವಿದ್ದರು. ಯಾವುದೋ ಕಾರಣಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಅನುಪಮಾ ನಗರದ ಖಾಸಗಿ ಆಸ್ಪತ್ರೆಯ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದು, ಇವರ ತಾಯಿ ವಿದೇಶದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಯುವತಿ ಮೃತಪಟ್ಟ ವಿಷಯವನ್ನು ಎರ್ನಾಕುಲಂನ ಆಕೆಯ ಕುಟುಂಬಕ್ಕೆ ಸಂದೇಶ ರವಾನಿಸಲಾಗಿದೆ. ಕುಟುಂಬಸ್ಥರು ಶನಿವಾರ ಮಂಗಳೂರಿಗೆ ಆಗಮಿಸಲಿದ್ದಾರೆ. (ಎಂ.ಎನ್)

Leave a Reply

comments

Related Articles

error: