ಮೈಸೂರು

ರಾಜ್ಯ ಮಟ್ಟದ ಪಿಯು ಜಿಮ್ನಾಸ್ಟಿಕ್ಸ್ ಕ್ರೀಡಾಕೂಟ ಉದ್ಘಾಟನೆ

ಮೈಸೂರು,ಅ.26:- ಪದವಿಪೂರ್ವ ಶಿಕ್ಷಣ ಇಲಾಖೆ, ಮೈಸೂರು ಜಿಲ್ಲೆ, ಮೈಸೂರು ಮತ್ತು ವಿಜಯ ವಿಠಲ ಪದವಿಪೂರ್ವ ಕಾಲೇಜು, ಸರಸ್ವತಿಪುರಂ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಇಂದು ರಾಜ್ಯಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿ/ವಿದ್ಯಾರ್ಥಿನಿಯರ ಜಿಮ್ನಾಸ್ಟಿಕ್ ಕ್ರೀಡಾಕೂಟವನ್ನು ಮೈಸೂರು ವಿಶ್ವವಿದ್ಯಾನಿಲಯದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಜಿಮ್ನಾಸ್ಟಿಕ್ಸ್ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಸಿ. ಕೃಷ್ಣಯ್ಯರವರು ನೆರವೇರಿಸಿದರು. ಈ ಸಂದರ್ಭ ವಿಜಯ ವಿಠಲ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಆರ್. ಗುರು, ಮೈಸೂರು ಜಿಲ್ಲೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ. ಬಿ.ಎನ್. ನಾಗರತ್ನ, ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಎಸ್.ಎಂ. ತುಳಸಿದಾಸ್, ಖಜಾಂಚಿಯವರಾದ ವಿ. ನಾಗರಾಜ್, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಕೆ.ಎಂ.ಕಾಂತರಾಜು, ವಿಜಯ ವಿಠಲ ವಿದ್ಯಾಸಂಸ್ಥೆಗಳ ಗೌರವ ಕಾರ್ಯದರ್ಶಿ ಆರ್. ವಾಸುದೇವಭಟ್, ವಿಜಯ ವಿಠಲ ಪದವಿಪೂರ್ವ ಕಾಲೇಜಿನ ಎಚ್. ಸತ್ಯಪ್ರಸಾದ್, ರಾಜ್ಯ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಖಜಾಂಚಿ ಎ.ಆನಂದಕುಮಾರ್ ಗೋಪಾಲಕೃಷ್ಣ ಮತ್ತು ಕೆ.ಆರ್. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: