ಮೈಸೂರು

ಕೇರಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಕೊಲೆ ಖಂಡಿಸಿ ‘ಮಾ.1’ರಂದು ಪ್ರತಿಭಟನೆ

ಆರ್‍.ಎಸ್.ಎಸ್. ಸ್ವಯಂ ಸೇವಕರನ್ನು ಹಾಗೂ ಎಬಿವಿಪಿ ಕಾರ್ಯಕರ್ತರನ್ನೇ ಗುರಿಯಾಗಿಸಿಕೊಂಡು ಕೇರಳದಲ್ಲಿ ಕಳೆದೊಂದು ತಿಂಗಳಿನಿಂದಲೂ ಹಲವಾರು ಕೊಲೆಗಳು ನಡೆದಿದ್ದು, ಪ್ರಕರಣಕ್ಕೆ ಆಡಳಿತಾತ್ಮಕ ಕಮ್ಯುನಿಷ್ಟ ಸರ್ಕಾರವೇ ನೇರ ಹೊಣೆಯಾಗಿದೆ. ಸರ್ಕಾರದ ನಡೆಯನ್ನು ಖಂಡಿಸಿ  ಮಾ.1ರಂದು ಸಿಟಿಜನ್ ಫಾರ್ ಡೆಮಾಕ್ರಸಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಚಾಲಕ ಚೇತನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇರಳದ ಎನ್‍ಡಿಎಫ್ ಸರ್ಕಾರದ ನಡೆಯನ್ನು ಖಂಡಿಸಿದ ಅವರು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಮಾ.1ರಂದು ಬೆಳಿಗ್ಗೆ 11ಕ್ಕೆ ನಗರದ ಕೋಟೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಸಂಸದ ಪ್ರತಾಪ್ ಸಿಂಹ, ಆರ್.ಎಸ್.ಎಸ್. ಪ್ರಾಂತ ಸಂಚಾಲಕ ಮಾ.ವೆಂಕಟರಾಮ್ ಭಾಗವಹಿಸುವರು ಎಂದರು.

ರಾಜ್ಯದಲ್ಲಿ ಕಳೆದೊಂದು ತಿಂಗಳಿನಿಂದಾಲೂ ನಡೆದಿರುವ 12 ಕೊಲೆಗಳು ಹಾಗೂ ಇತರೆ ಹಗರಣಗಳ ಹಿಂದೆ ಕೇರಳದ ಕಮ್ಯುನಿಷ್ಟ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಿ ಕೇರಳದಲ್ಲಿ 50 ವರ್ಷಗಳಿಂದಲೂ 280 ಅಧಿಕ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಕೊಲೆ ಹಾಗೂ ಮಹಿಳೆಯರ ಮೇಲೆ ಅತ್ಯಾಚಾರಗಳು ನಿರಂತರವಾಗಿ ನಡೆದಿವೆ. ರಾಜ್ಯದಲ್ಲಿ ಬಹುಸಂಖ್ಯಾತರಿಗೆ ಭಯದ ವಾತಾವರಣವಿದೆ, ಇಂದಿಗೂ ಯಾವೊಬ್ಬ ಕಮ್ಯುನಿಷ್ಟರ ಮೇಲೆ ಕೇಸ್ ದಾಖಲಾಗಿಲ್ಲದೇ ಇರುವುದು ಶೋಚನೀಯವೆಂದ ಅವರು ಕೇರಳ ಸರ್ಕಾರದ ನಿರಂಕುಶ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದರು.

ಸಂಸ್ಥೆಯ ಅಧ್ಯಕ್ಷ ವಾಸುದೇವ್ ಭಟ್, ಮುರಳಿಧರ್ ಹಾಗೂ ಹರೀಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

comments

Related Articles

error: