ಮೈಸೂರು

ಜಿಲ್ಲೆಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸಾವು

ಮೈಸೂರು,ಅ.30:- ಜಿಲ್ಲೆಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ನಂಜನಗೂಡಿನಲ್ಲಿ ಒಬ್ಬರು ಹಾಗೂ ಬಿಳಿಕೆರೆಯಲ್ಲಿ ಒಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ನಂಜನಗೂಡಿನ ಕಳಲೆ ಗೇಟ್ ಬಳಿ ಗುಂಡ್ಲುಪೇಟೆ ಕಡೆಯಿಂದ ಬಂದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವಿಜಯಲಕ್ಷ್ಮಿ ಎಂಬವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಸಹನಾ, ಅಮೃತಾ, ಬಿಂದು ಎಂಬವರು ಗಾಯಗೊಂಡಿದ್ದಾರೆ.

ಈ ಕುರಿತು ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಳಿಕೆರೆ ಸಮೀಪದ ಹೊಸೂರು ಮಾರಮ್ಮ ದೇವಸ್ಥಾನದ ಬಳಿ ದೊಡ್ಡೆಗೌಡನ ಕೊಪ್ಪಲು ಗ್ರಾಮದ ನಿವಾಸಿ ಶಿವೇಗೌಡ ಎಂಬವರು ಬೈಕ್ ನಲ್ಲಿ ಕ್ರಾಸ್ ರೋಡ್ ನಿಂದ ಹುಣಸೂರು-ಮೈಸೂರು ರಸ್ತೆಗೆ ಬಂದಾಗ ಹುಣಸೂರಿನಿಂದ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಶಿವೇಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: