ಪ್ರಮುಖ ಸುದ್ದಿ

ಅಕ್ರಮ ಹಣ ವರ್ಗಾವಣೆ ಪ್ರಕರಣ : ಮಾಜಿ ಸಚಿವ ಡಿಕೆ ಶಿವಕುಮಾರ್ ತಾಯಿ ಹಾಗೂ ಪತ್ನಿಯ ಅರ್ಜಿ ವಿಚಾರಣೆ ನವೆಂಬರ್ 4ಕ್ಕೆ ಮುಂದೂಡಿಕೆ

ದೇಶ(ನವದೆಹಲಿ)ಅ.30:-   ಮಾಜಿ ಸಚಿವ ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆಯ ಆರೋಪ ಹೊತ್ತಿದ್ದು, ಅವರ ತಾಯಿ ಹಾಗೂ ಪತ್ನಿಯ ಅರ್ಜಿ ವಿಚಾರಣೆ ನವೆಂಬರ್ 4ಕ್ಕೆ ಮುಂದೂಡಿಕೆಯಾಗಿದೆ.

ಬೆಂಗಳೂರಿನಲ್ಲಿ ವಿಚಾರಣೆ ನಡೆಸುವಂತೆ ಡಿಕೆಶಿ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ದೆಹಲಿ ಹೈಕೋರ್ಟಿನಲ್ಲಿ ಇಂದು ವಿಚಾರಣೆಗೆ ಬಂದಿತ್ತು. ಹೀಗಾಗಿ ನ್ಯಾಯಮೂರ್ತಿ ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಇದೀಗ ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆಯ ವೇಳೆ ಗೌರಮ್ಮ ಪರ ವಕೀಲರು ಬೆಂಗಳೂರಿನಲ್ಲಿ ವಿಚಾರಣೆಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡರು. ಆದರೆ ಈ ಬಗ್ಗೆ ಜಾರಿ ನಿರ್ದೇಶನಾಲಯ(ಇಡಿ) ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಇದುವರೆಗೂ ಯಾವುದೇ ಸಮನ್ಸ್ ಸಿಕ್ಕಿಲ್ಲ ಎಂದು ಡಿಕೆಶಿ ಪತ್ನಿ, ತಾಯಿ ಗೌರಮ್ಮ ಪರ ವಕೀಲರು ತಿಳಿಸಿದರು. ಈ ವೇಳೆ ನ್ಯಾಯಾಧೀಶರು ಹೊಸ ಸಮನ್ಸ್ ನೀಡಿ ಎಂದಾಗ ಇಡಿ ಪರ ವಕೀಲರು ಈಗಾಗಲೇ ಸಮನ್ಸ್ ನೀಡಲಾಗಿದ್ದು, ಹೊಸ ಸಮನ್ಸ್ ಅವಶ್ಯಕತೆ ಇಲ್ಲ ಎಂದಿದ್ದಾರೆ. ಹಾಗಾದರೆ ಸ್ವಲ್ಪ ಕಾಯಿರಿ. ಸಮನ್ಸ್ ತಲುಪಬಹುದು ಎಂದು ನ್ಯಾಯಮೂರ್ತಿಗಳು ತಿಳಿಸಿದ್ದು, ವಿಚಾರಣೆ ನ.4ಕ್ಕೆ ಮುಂದೂಡಿದರು. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: