ಕರ್ನಾಟಕ

ರಾಮನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಹಲವರಿಗೆ ಗಾಯ

ರಾಮನಗರ,ಅ.30- ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ನಡೆದಿದೆ.

ಪುತ್ತೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಲ್ಲಿ 32 ಮಂದಿ ಪ್ರಯಾಣಿಸುತ್ತಿದ್ದರು. (ಎಂ.ಎನ್)

Leave a Reply

comments

Related Articles

error: