ಪ್ರಮುಖ ಸುದ್ದಿ

   ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಪ್ರತೀಕ  : ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ರಾಜ್ಯ(ಬೆಳಗಾವಿ )ಅ.30:- ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು,  ನಮ್ಮ ಸಂಸ್ಕೃತಿ ಹಾಗೂ ಪರಂಪರೆಗಳು ಉಳಿಸಿಕೊಂಡು ಹೋಗುವ ದಿಸೆಯಲ್ಲಿ ದೇವಸ್ಥಾನಗಳನ್ನು ಉಳಿಸಿ ಬೆಳೆಸಬೇಕು ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕರೆ ನೀಡಿದ್ದಾರೆ.

ಶೆಗನಮಟ್ಟಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ಮಂದಿರದ ಉದ್ಘಾಟನೆ ಹಾಗೂ ವಾಸ್ತು ಶಾಂತಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಾತ್ರೆ, ಪುರಾಣ, ಪ್ರವಚನಗಳ ಮೂಲಕ ಸಮಾಜಕ್ಕೆ ಉತ್ತಮವಾದ ಸಂಸ್ಕಾರವನ್ನು ಕಲಿಸಿ ಕೊಡುವುದರಲ್ಲಿ,ದೇವಸ್ಥಾನಗಳು ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಿಂದ ಜನರಿಗೆ ನೆಮ್ಮದಿ, ಶಾಂತಿ ಸಿಗುತ್ತದೆ. ಇವತ್ತಿನ ಯುವ ಪೀಳಿಗೆಗೆ ಈ ದಿಸೆಯಲ್ಲಿ ಮಾರ್ಗದರ್ಶನ ನೀಡುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.

ಸಮಾರಂಭದಲ್ಲಿ ಮಠಾಧೀಶರು, ದೇವಸ್ಥಾನ ಕಮೀಟಿಯವರು, ಗ್ರಾಮದ   ಹಿರಿಯರು  ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: