ಕರ್ನಾಟಕ

ಮದುವೆಗೆ ಆಹ್ವಾನಿಸಲು ತೆರಳುತ್ತಿದ್ದ ವೇಳೆ ಅಪಘಾತ: ವ್ಯಕ್ತಿ ಸಾವು

ಬೆಂಗಳೂರು,ಅ.31-ಮೊಮ್ಮಗನ ಮದುವೆಗೆ ಸಂಬಂಧಿಕರನ್ನು ಆಹ್ವಾನಿಸಲು ಹೋಗುತ್ತಿದ್ದ ವ್ಯಕ್ತಿಗೆ ಶಾಲಾ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಯಶವಂತಪುರದಲ್ಲಿ ನಡೆದಿದೆ.

ನಂದಿನಿ ಲೇಔಟ್ ಬಸವರಾಜಯ್ಯ ಮೃತಪಟ್ಟವರು. ನ.10ರಂದು ಮೊಮ್ಮಗನ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಸಂಬಂಧಿಕರು, ಗೆಳೆಯರನ್ನು ಆಹ್ವಾನಿಸಲು ಹೋಗಿದ್ದರು. ಯಶವಂತಪುರ ಸರ್ಕಲ್ ಬಳಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.

ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಂ.ಎನ್)

Leave a Reply

comments

Related Articles

error: